ಆಡಳಿತಾರೂಢ ಕಾಂಗ್ರೆಸ್‌ಗೆ ಮುಖಭಂಗ: ಉಪಚುನಾವಣೆಯಲ್ಲಿ ಕಾಂಗ್ರೆಸ್‌ನ್ನು ಹಿಂದಿಕ್ಕಿದ ಜೆಡಿಎಸ್‌

ಕೋಲಾರ: ಕೋಲಾರ ನಗರಸಭೆ ಕಠಾರಿಪಾಳ್ಯದ 21ನೇ ವಾರ್ಡ್‌ಗೆ ನಡೆದಿದ್ದ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಮೋಹನ್ ಬಾಬು 158 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಶಾಸಕ ವರ್ತೂರ್ ಪ್ರಕಾಶ್ ಬೆಂಬಲಿತ ಕಾಂಗ್ರೆಸ್ ಅಭ್ಯರ್ಥಿ ರಮೇಶ್‌ಗೆ ಹೀನಾಯ ಸೋಲಾಗಿದೆ. ಮತ್ತೊಂದೆಡೆ ಮಂಡ್ಯದ್ಲಲಿ ನಡೆದ ನಗರಸಭೆ 28ನೇ ವಾರ್ಡಿನ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ತೀವ್ರ ಮುಖಭಂಗವಾಗಿದೆ. ಇಲ್ಲೂ ಜೆಡಿಎಸ್‌ ಅಭ್ಯರ್ಥಿ ರಾಜು 207 ಮತಗಳ ಅಂತರದಿಂದ ಗೆದ್ದಿದ್ದಾರೆ. ಇತ್ತ ಕೊಪ್ಪ ಜಿಪಂ ಉಪ ಚುನಾವಣೆಯಲ್ಲೂ ಜೆಡಿಎಸ್‌ ಗೆಲುವು ದಾಖಲಿಸಿದೆ. ಜಿಪಂ ಸದಸ್ಯೆಯ ಅಕಾಲಿಕ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್‌ನ ರೇಣುಕಾ ರಾಮಕೃಷ್ಣ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇನ್ನು ಬೀದರ್‌ ನಗರಸಭೆ ವಾರ್ಡ್‌ನ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ನ ಅಭ್ಯರ್ಥಿ ಸರಸ್ವತಿ ಮಂಜುನಾಥ್‌ ಭಾರೀ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಒಟ್ಟಾರೆಯಾಗಿ ಆಡಳಿತಾರೂಢ ಕಾಂಗ್ರೆಸ್‌ಗಿಂತ ಜೆಡಿಎಸ್‌ ಹೆಚ್ಚಿನ ಗೆಲುವು ದಾಖಲಿಸಿರುವುದು ಕಾಂಗ್ರೆಸ್‌ಗೆ ಮುಖಭಂಗವಾಗಿದೆ.

Comments are closed.

Social Media Auto Publish Powered By : XYZScripts.com