ಹುಬ್ಬಳ್ಳಿ : ಕೆರೆಗೆ ಉರುಳಿ ಬಿದ್ದ ಬಸ್, 35 ಕ್ಕೂ ಹೆಚ್ಚು ಜನರಿಗೆ ಗಾಯ, ತಪ್ಪಿದ ಅನಾಹುತ

ಹುಬ್ಬಳ್ಳಿ : ಹುಬ್ಬಳ್ಳಿ ಹೊರವಲಯದ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ವರೂರ ಕ್ರಾಸ್ ಬಳಿ ಖಾಸಗಿ ಬಸ್ ಕೆರೆಗೆ ಉರುಳಿ ಬಿದ್ದಿದೆ. ಬೆಂಗಳೂರು ನಿಂದ ಬಾಂಬೆಗೆ ಹೊರಟಿದ್ದ ಖಾಸಗಿ ಬಸ್  ವರೂರ ಕ್ರಾಸ್ ಬಳಿ ಇರುವ ಮಾಜಿ ಸಚಿವ ಬಸವರಾಜ ಹೊರಟ್ಟಿ ಪಾರ್ಮ್ ಹೌಸ್ ನ ಕೆರೆಗೆ ಉರುಳಿ ಬಿದ್ದಿದೆ.

 

 

ಬಸ್ ನಲ್ಲಿದ್ದ ಮೂವತ್ತಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ದೊಡ್ಡ ಪ್ರಮಾಣದ ದುರಂತ ತಪ್ಪಿದಂತಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಅವಘಡ ನಡೆದಿದೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

 

Comments are closed.

Social Media Auto Publish Powered By : XYZScripts.com