ಎಚ್ ಡಿಕೆ, ದೇವೇಗೌಡರ ನೇತೃತ್ವದಲ್ಲಿ ಸಭೆ, ಮುಂದಿನ ಚುನಾವಣೆಗೆ ಜೆಡಿಎಸ್ ಕಾರ್ಯತಂತ್ರ..

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೆಗೌಡ, ರಾಜ್ಯಾಧ್ಯಕ್ಷ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಮತ್ತು ಕೋರ್ ಕಮಿಟಿ ಸಭೆ ನಡೆಯುತ್ತಿದೆ. ಮುಂದಿನ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ, ಅಭ್ಯರ್ಥಿಗಳ ಆಯ್ಕೆ, ರಾಜ್ಯದ ವಿವಿಧೆಡೆ ಸಮಾವೇಶ ನಡೆಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತಿದೆ. ರೈತ , ಹಿಂದುಳಿದ, ಪರಿಶಿಷ್ಜ ಜಾತಿ ಸಮಾವೇಶಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗುತ್ತಿದೆ. ಸಭೆಯಲ್ಲಿ ಶಾಸಕರು, ಪರಿಷತ್ ಸದಸ್ಯರು, ಜಿಲ್ಲಾಧ್ಯಕ್ಷರು, ಪಧಾದಿಕಾರಿಗಳು ಭಾಗಿಯಾಗಿರುವ ಈ ಸಭೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆಯುತ್ತಿದೆ. ಜೆಡಿಎಸ್ ಕಾರ್ಯಾಧ್ಯಕ್ಷ ಬಸವರಾಜ ಹೊರಟ್ಟಿ, ಮಾಜಿ ಸಚಿವ ವಿಶ್ವನಾಥ್, ಸಂಸದ ಪುಟ್ಟರಾಜು, ಶಾಸಕ ಮಧುಬಂಗಾರಪ್ಪ, ಬಿ.ಬಿ.ನಿಂಗಯ್ಯ, ಪ್ರಧಾನ ಕಾರ್ಯದರ್ಶಿ ಬಿ.ಎಂ.ಫಾರೂಕ್. ಸೇರಿದಂತೆ ಹಲವರು ಉಪಸ್ಥಿತರಿದ್ದಾರೆ. ಮೊನ್ನೆಯಷ್ಟೆ ಜೆಡಿಎಸ್ ಸೇರಿದ ಎಚ್.ವಿಶ್ವನಾಥ್ ಕೂಡ ಸಭೆಯಲ್ಲಿ ಭಾಗಿಯಾಗಿದ್ದಾರೆ.

ಜೆಡಿಎಸ್ ಸಭೆಯಲ್ಲಿ ಟಿಕೆಟ್ ವಿಚಾರವಾಗಿ ಸಭೆಯಲ್ಲಿ ಚರ್ಚೆ ನಡೆಯಲಿದ್ದು, ದೇವೇಗೌಡ ಕುಟುಂಬದಲ್ಲೇ ಹೆಚ್ಚಾದ ಟಿಕೆಟ್ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಅನಿತಾ ಕುಮಾರಸ್ವಾಮಿ, ಭವಾನಿ ರೇವಣ್ಣ, ಪ್ರಜ್ವಲ್ ರೇವಣ್ಣ ರಿಗೆ ಟಿಕೆಟ್ ನೀಡಲು ಕಾರ್ಯಕರ್ತರ ಒತ್ತಡ ನಿರ್ಮಾಣವಾಗಿದೆ. ಕುಟುಂಬ ರಾಜಕಾರಣಕ್ಕೆ ಬ್ರೇಕ್ ಹಾಕಲು ದೇವೇಗೌಡ ಕಸರತ್ತು ನಡೆಸಿದ್ದಾರೆ. ಈ ನಡುವೆ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡಲು ಹೆಚ್ಚಿದ ಒತ್ತಡ ಹೆಚ್ಚಾಗಿದೆ. ಹೀಗಾಗಿ ಟಿಕೆಟ್ ವಿಚಾರ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ.

Comments are closed.

Social Media Auto Publish Powered By : XYZScripts.com