ಆಷಾಡದ ಎರಡನೇ ಶುಕ್ರವಾರ ಹಿನ್ನೆಲೆ: ಚಾಮುಂಡೇಶ್ವರಿಗೆ ವಿಶೇಷ ಪೂಜೆ

ಮೈಸೂರು: ಆಶಾಡ ಮಾಸದ ಎರಡನೇ ಶುಕ್ರವಾರವಾದ ಇಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರುತ್ತಿವೆ. ಇಂದು ಮುಂಜಾನೆಯಿಂದಲೇ ಚಾಮುಂಡೇಶ್ವರಿಗೆ ಮಹಾನ್ಯಾಸಕ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನಡೆಯುತ್ತಿದೆ. ಹಸಿರು ಜರತಾರಿ ಸೀರೆಯುಟ್ಟ ಚಾಮುಂಡೇಶ್ವರಿಯ ದರ್ಶನಕ್ಕಾಗಿ ಸಾವಿರಾರು ಮಂದಿ ಆಗಮಿಸುತ್ತಿದ್ದು, ನೂಕು ನುಗ್ಗಲು ಉಂಟಾಗದಂತೆ ಬಿಗಿ ಪೊಲೀಸ್‌ ಬಂದೋಬಸ್ತ್ ಹಾಕಲಾಗಿದೆ.

Comments are closed.