ಪ್ರಜ್ವಲ್‌ ಮಾತಿಗೆ ಬೆಲೆ ಕೊಡುವ ಅವಶ್ಯಕತೆ ಇಲ್ಲ: ಎಚ್‌.ಡಿ ರೇವಣ್ಣ ಹೇಳಿಕೆ

ಮೈಸೂರು: ಜೆಡಿಎಸ್‌ ನಲ್ಲಿ ಯಾವುದೇ ಭಿನ್ನಮತವಿಲ್ಲ. ತಮ್ಮ ಪುತ್ರ ಪ್ರಜ್ವಲ್‌ ಹೇಳಿಕೆಗೆ ಹೆಚ್ಚಿನ ಮಹತ್ವ ಕೊಡುವ ಅಗತ್ಯವಿಲ್ಲ ಎಂದು ಎಚ್‌.ಡಿ ರೇವಣ್ಣ ಹೇಳಿದ್ದಾರೆ. ಆಷಾಡ ಶುಕ್ರವಾರದ ಪ್ರಯುಕ್ತ ಮೈಸೂರು ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ರೇವಣ್ಣ ದಂಪತಿ, ಜೆಡಿಎಸ್‌ನಲ್ಲಿ ದೇವೇಗೌಡರು ಹೇಳುವ ಮಾತೇ ಅಂತಿಮ. ಅವರ ಮಾತನ್ನು ಯಾರೂ ಮೀರುವುದಿಲ್ಲ ಎಂದಿದ್ದಾರೆ. ಜೊತೆಗೆ ಜೆಡಿಎಸ್‌ನಲ್ಲಿ ಯಾವುದೇ ಅಸಮಾಧಾನ ಇಲ್ಲ. ಎಲ್ಲರೂ ಒಗ್ಗಟ್ಟಿನಿಂದಿದ್ದೇವೆ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದಿದ್ದಾರೆ. ಮಾಜಿ ಸಂಸದ ವಿಶ್ವನಾಥ್, ಜೆಡಿಎಸ್‌ ಸೇರ್ಪಡೆಯಿಂದ ಅಸಮಾಧಾನವಾಗಿಲ್ಲ ಎಂದಿರುವ ರೇವಣ್ಣ, ವಿಶ್ವನಾಥ್‌ ಹಿರಿಯ ರಾಜಕಾರಣಿ. ಅವರ ಸೇರ್ಪಡೆಯಿಂದ ಜೆಡಿಎಸ್‌ಗೆ ಮತ್ತಷ್ಟು ಬಲ ಬಂದಿದೆ ಎಂದಿದ್ದಾರೆ. ಚಾಮುಂಡಿಗೆ ವಿಶೇಷ ಪೂಜೆ ಸಲ್ಲಿಸಿದ್ದೇವೆ. ರಾಜ್ಯದಲ್ಲಿ ಉತ್ತಮ ಮಳೆಯಾಗಲಿ. ಜನರ ಸಂಕಷ್ಟಗಳು ದೂರವಾಗಲಿ  ಎಂದು ದೇವಿಯನ್ನು ಬೇಡಿಕೊಂಡಿರುವುದಾಗಿ ಹೇಳಿದ್ದಾರೆ.

 

 

Comments are closed.