ಶ್ರೀಗಳಿಗೆ ಸಾಥ್‌ ನೀಡಲು ಕೃಷ್ಣ ಮಠಕ್ಕೆ ತೆರಳಿದ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್‌

ಉಡುಪಿ: ಉಡುಪಿಯ ಕೃಷ್ಣ ಮಠಕ್ಕೆ ಕೆಪಿಸಿಸಿ ರಾಜ್ಯಾಧ್ಯಕ್ಷ  ಜಿ.ಪರಮೇಶ್ವರ್‌ ಹಾಗೂ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್‌ ಭೇಟಿ ನೀಡಿದ್ದು, ಶ್ರೀಗಳೊಂದಿಗೆ ಮಾತುಕತೆ ನಡೆಸಿದ್ದಾರೆ. ಭೇಟಿಯ ನಂತರ ಮಾತನಾಡಿರುವ ಪರಮೇಶ್ವರ್‌, ಸ್ವಾಮೀಜಿ ಭೇಟಿಯಲ್ಲಿ ಯಾವುದೇ ರಾಜಕೀಯ ಇಲ್ಲ. ಸಮಾಜದಲ್ಲಿ ಸಾಮರಸ್ಯ ಇರಬೇಕು ಎಂದು ಸ್ವಾಮೀಜಿ ಇಫ್ತಾರ್ ಕೂಟ ಏರ್ಪಡಿಸಿದ್ದನ್ನು ನಾವು ಬೆಂಬಲಿಸುತ್ತೇವೆ. ಅವರ ತೀರ್ಮಾನವನ್ನು ಸ್ವಾಗತಿಸುತ್ತೇವೆ ಎಂದಿದ್ದಾರೆ. ಮುಂದಿನ ಚುನಾವಣೆಯಲ್ಲಿ ಟಿಕೆಟ್‌ ಹಂಚಿಕೆ ವಿಚಾರ ಕುರಿತಂತೆ ಪ್ರತಿಕ್ರಿಯಿಸಿರುವ ಪರಮೇಶ್ವರ್‌, ನಾವು ಎಲ್ಲಾ ಸಚಿವರನ್ನು ಗಮನಿಸಿ ವರದಿಯನ್ನು ತರಿಸಿಕೊಳ್ಳುತ್ತೇವೆ. ಸರ್ವೇಗಳನ್ನು ನಡೆಸಿ ಅದರ ಆಧಾರದ ಮೇಲೆ ವಸ್ತುಸ್ಥಿತಿ ತಿಲಿದುಕೊಂಡು ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ. ಇನ್ನು ಯಡಿಯೂರಪ್ಪ ದಲಿತರ ಮನೆ ಭೇಟಿ ವಿಚಾರ ಕುರಿತಂತೆ ಹೇಳಿಕೆ ನೀಡಿದ್ದು, ಇದು ನಾಟಕೀಯ. ರಾಜಕಾರಣಕ್ಕಾಗಿ ಇದನ್ನು ಮಾಡುತ್ತಿದ್ದಾರೆ. ಜನರನ್ನು ತಪ್ಪು ದಾರಿಗೆ ಒಯ್ಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದಿದ್ದಾರೆ. ಅವರ ಸರಕಾರ ಇರುವಾಗ ದಲಿತರ ಸಮಸ್ಯೆಗೆ ಸ್ಪಂದಿಸಿಲ್ಲ. ಇದು ಕೇವಲ ರಾಜಕಾರಣ ಎಂದು ಇಡೀ ಜಗತ್ತಿಗೆ ಗೊತ್ತಾಗುತ್ತಿದೆ ಎಂದಿದ್ದಾರೆ.

Comments are closed.

Social Media Auto Publish Powered By : XYZScripts.com