ಯುವಕನ ಮೇಲೆ ಅಪರಿಚಿತರಿಂದ ಹಲ್ಲೆ: ಗಾಯಾಳು ಆಸ್ಪತ್ರೆಗೆ ದಾಖಲು

ಬೆಂಗಳೂರು: ಇಲ್ಲಿನ ಕುತ್ತಾರು ರಾಣಿಪುರದಲ್ಲಿ ಯುವಕನ ಮೇಲೆ ಅಪರಿಚಿತರು ತಲವಾರಿನಿಂದ ದಾಳಿ ನಡೆಸಿರುವ ಘಟನೆ ನಡೆದಿದೆ.

ಚಿರಂಜೀವಿ (24) ಅಪರಿಚಿತರಿಂದ ಹಲ್ಲೆಗೊಳಗಾದ ಯುವಕ. ಚಿರಂಜೀವಿ ಬೈಕ್‍ನಲ್ಲಿ ಚಲಿಸುತ್ತಿದ್ದ ವೇಳೆ ಬೈಕ್‍ನಲ್ಲೆ ಬಂದಿದ್ದ ಮೂವರು ದುಷ್ಕರ್ಮಿಗಳು ತಲವಾರಿನಿಂದ ಚಿರಂಜೀವಿ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ.ಹಲ್ಲೆಯಿಂದ ತೀವ್ರ ಗಾಯಗೊಂಡಿದ್ದ ಚಿರಂಜೀವಿಯನ್ನು ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ.

ಈ ಸಂಬಂಧ ಉಳ್ಳಾಲ ಪೊಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.