ಪ್ರಜ್ವಲ್‌ ಹೇಳಿಕೆಯಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಿಲ್ಲ: ಎಚ್‌.ಡಿ ಕುಮಾರಸ್ವಾಮಿ

ಮೈಸೂರು: ಜೆಡಿಎಸ್‌ನಲ್ಲಿ ಅಸಮಾಧಾನವಿದೆ ಎನ್ನುವಂತೆ ಮಾತನಾಡಿದ್ದ ಪ್ರಜ್ವಲ್‌ ರೇವಣ್ಣ ಹೇಳಿಕೆ ಕುರಿತು ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಪ್ರಜ್ವಲ್‌ ಹೇಳಿಕೆಯಿಂದ ನನಗೆ ಅಸಮಾಧಾನವಾಗಿಲ್ಲ. ಅವರು ನನ್ನನ್ನು ಭೇಟಿ ಮಾಡಿಲ್ಲ, ಮಾಡುವ ಅಗತ್ಯವೂ ಇಲ್ಲ. ನಮ್ಮ ಪಕ್ಷದಲ್ಲೂ ಯಾವುದೇ ಅಸಮಾಧಾನವಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ನಮ್ಮ ಪಕ್ಷದ ಎಲ್ಲಾ ನಾಯಕರು ಚೆನ್ನಾಗಿಯೇ ಇದ್ದೇವೆ. ಅಸಮಾಧಾನವಿದೆ ಎನ್ನುವುದು ಕೆಲವರ ಸೃಷ್ಠಿಯಷ್ಟೇ. ಪ್ರಜ್ವಲ್‌ ಹೇಳಿಕೆಯಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಿಲ್ಲ ಎಂದಿದ್ದಾರೆ. ಪ್ರಜ್ವಲ್ ಹೇಳಿಕೆಯಂತೆ ನಮ್ಮಲ್ಲಿ ಸೂಟ್ ಕೇಸ್ ರಾಜಕಾರಣ ಮಾಡುವವರು ಈ ಮೊದಲ ಇದ್ದರು. ಅವರೆಲ್ಲ ಪಕ್ಷ ಬಿಟ್ಟಿದ್ದಾರೆ. ಅವರನ್ನು ನೆನಪಿಸಿಕೊಂಡು ಪ್ರಜ್ವಲ್ ಹೇಳಿಕೆ ನೀಡರಬಹುದು.ಹೀಗಾಗಿ ಆ ವಿಚಾರವನ್ನು ಮತ್ತೆ ಮತ್ತೆ ಪ್ರಸ್ತಾಪಿಸುವುದು ಬೇಡ ಎಂದಿದ್ದಾರೆ.

Comments are closed.

Social Media Auto Publish Powered By : XYZScripts.com