ಚಿತ್ತಾಪುರದಲ್ಲಿ ಸಿಡಿಲು ಬಡಿದು ಯುವಕ ಸಾವು : ಇಬ್ಬರಿಗೆ ಗಂಭೀರ ಗಾಯ

ಕಲಬುರ್ಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ಸೋಮಾನಾಯಕ ತಾಂಡಾ ಬಳಿ ಯುವಕನೊಬ್ಬ ಸಿಡಿಲು ಬಡಿದು ಮೃತಪಟ್ಟ ಘಟನೆ ನಡೆದಿದೆ.

ನಾರಾಯಣ ಪವಾರ (21) ಸಿಡಿಲು ಬಡಿದು ಮೃತಪಟ್ಟ ಯುವಕ. ಸಿಡಿಲಿನ ರಭಸಕ್ಕೆ ದೆವ್ಲಾ ಪವಾರ್ ಮತ್ತು ಜ್ಯೋತಿ  ಎಂಬವರಿಗೆ ತೀವ್ರ ಗಾಯಗಳಾಗಿವೆ. ಮೂವರು ಕುರಿ ಕಾಯಲು ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಗಾಯಾಳುಗಳನ್ನು ವಾಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸಂಬಂಧ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.

Social Media Auto Publish Powered By : XYZScripts.com