ಮಾತುಕತೆಗೆ ಮಹಾರಾಷ್ಟ್ರ ಒಪ್ಪಿಗೆ: ಗೋವಾ ಸಿಎಂಗೆ ಸಿದ್ದರಾಮಯ್ಯ ಪತ್ರ

ಬೆಂಗಳೂರು: ಮಹಾದಾಯಿ ನದಿ ನೀರು ಹಂಚಿಕೆ ವಿವಾದ ಕುರಿತಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಪತ್ರ ಬರೆದಿದ್ದಾರೆ.

ಮಹಾದಾಯಿ ವಿಚಾರವಾಗಿ ಕರ್ನಾಟಕ, ಮಹಾರಾಷ್ಟ್ರ ಹಾಗೂ ಗೋವಾದ ನಡುವೆ ಭಿನ್ನಾಭಿಪ್ರಾಯಗಳಿದ್ದು, ಈ ವಿಚಾರವನ್ನು ಚರ್ಚಿಸಲು ಮೂರೂ ರಾಜ್ಯಗಳೂ ಸಭೆ ನಡೆಸಿ ಸಮಸ್ಯೆ ಬಗೆಹರಿಸುವಂತೆ ಗೋವಾ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದರು. ಈ ಪತ್ರಕ್ಕೆ ಪ್ರತಿಕ್ರಿಯಿಸಿರುವ ದೇವೇಂದ್ರ ಫಡ್ನವೀಸ್‌, ಈ ವಿಚಾರವನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳುವ ಸಿದ್ದರಾಮಯ್ಯ ಅವರ ನಿರ್ಧಾರ ಸ್ವಾಗತಾರ್ಹವಾಗಿದೆ. ಗೋವಾ ಸಿಎಂ ಜೊತೆ ಮಾತನಾಡಿ ಸಭೆಗೆ ದಿನಾಂಕವನ್ನು ತಿಳಿಸಿದರೆ ಸಭೆಗೆ ಹಾಜರಾಗಿ ವಿವಾದವನ್ನು ಬಗೆಹರಿಸುವ ಕುರಿತು ಚರ್ಚೆ ನಡೆಸೋಣ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

Social Media Auto Publish Powered By : XYZScripts.com