ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರರಷ್ಟೇ ಸತ್ಯ : ಬಿಎಸ್‌ವೈ

ಉಡುಪಿ : ನಮ್ಮ ಹೋರಾಟ ಪೊಲೀಸರ ವಿರುದ್ಧವಲ್ಲ. ನಿಮಗೆ ಮಾನ ಮರ್ಯಾದೆ ಇದ್ದರೆ ಕೆಂಪಯ್ಯನ ಕೈ ಕೆಳಗೆ ಕೆಲಸ ಮಾಡಬೇಡಿ ಎಂದು ಮಾಜಿ ಸಿಎಂ ಯಡಿಯೂರಪ್ಪ ಪೊಲೀಸರಿಗೆ ಸೂಚಿಸಿದ್ದಾರೆ. ಜುಲೈ 16ರಂದು ನಾವು ದೆಹಲಿಗೆ ಭೇಟಿ ನೀಡಿ, ರಾಷ್ಟ್ರೀಯ ತನಿಖಾ ದಳದಿಂದ ತನಿಖೆಗೆ ಒತ್ತಾಯಿಸುತ್ತೇವೆ ಎಂದಿರುವ ಯಡಿಯೂರಪ್ಪ, ಕೆಂಪಯ್ಯ ದರ್ಪ ತೋರಿಸುವ ಅಧಿಕಾರಿ. ಅವನ ಹಿನ್ನೆಲೆ ನಮಗೆ ಗೊತ್ತು. ಬಿಜೆಪಿ ಸರ್ಕಾರ ಮಾತ್ರ ಇದಕ್ಕೆ ಪರಿಹಾರ ನೀಡಲು ಸಾಧ್ಯ.  ಮುಂದೆಯೂ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಸಿಎಂ ಹೇಳಿದ್ದಾರೆ. ಆದರೆ ಬಿಜೆಪಿ ಅಧಿಕಾರ ಕ್ಕೆ ಬರೋದು ಸೂರ್ಯ ಚಂದ್ರ ಇರುವಷ್ಟೇ ಸತ್ಯ ಎಂದಿದ್ದಾರೆ.

 

Comments are closed.