ರಾಷ್ಟ್ರಧ್ವಜ ಹಾರಿಸಬೇಕಾದ ಧ್ವಜಸ್ತಂಭದಲ್ಲಿ ಹಾರಾಡಿದ ಬಿಜೆಪಿ ಧ್ವಜ

ವಿಜಯಪುರ: ಸರ್ಕಾರಿ ಶಾಲೆ ಅಂದ್ರೆ ಜ್ಙಾನ ದೇಗುಲ. ಇಲ್ಲಿ ನೂರಾರು ಮಕ್ಕಳ ಭವಿಷ್ಯ ರೂಪಿಸಲಾಗುತ್ತದೆ. ಇಂತಹ ಪವಿತ್ರ ಸ್ಥಳವಾದ ಶಾಲೆ ಆವರಣದಲ್ಲಿ ರಾಷ್ಟ್ರಧ್ವಜ ಹಾರಿಸುವ ಸ್ಥಳದಲ್ಲಿ ಬಿಜೆಪಿ ಧ್ವಜ ಹಾರಿಸುವ ಮೂಲಕ ಬಿಜೆಪಿ ಯಡವಟ್ಟು ಮಾಡಿದೆ. ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಗಣಿ ಗ್ರಾಮದಲ್ಲಿ ಈ ಅವಾಂತರ ನಡೆದಿದೆ. ನಿನ್ನೆ ನಡೆದ ಬಿಜೆಪಿ ಮಂಡಳಿ ಕಾರ್ಯಕರ್ತರ ಸಭೆಯಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್ ಈಶ್ವರಪ್ಪ ಭಾಗವಹಿಸಿದ್ರು. ಈ ವೇಳೆ ಗಣಿ ಗ್ರಾಮದ ಸರ್ಕಾರಿ ಕನ್ನಡ ಬಾಲಕರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಿಸಲಾದ ಧ್ವಜ ಕಂಬದಲ್ಲಿ ಬಿಜೆಪಿ ಧ್ವಜ ಹಾರಿಸಲಾಗಿದೆ. ರಾಷ್ಟ್ರಧ್ವಜ ಹಾರಿಸುವ ಸ್ಥಳದಲ್ಲಿ ಬಿಜೆಪಿ ಧ್ವಜ ಹಾರಿಸಿದ್ದು ಇದೀಗ ವಿವಾದಕ್ಕೆ ಕಾರಣವಾಗಿದೆ. ಇನ್ನು ಇಷ್ಟೆಲ್ಲ ಅವಾಂತರಕ್ಕೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಸುಶೀಲಾಬಾಯಿ ಪವಾರ ಕಾರಣ ಎನ್ನಲಾಗಿದೆ. ಈ ಪ್ರಕರಣ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕಿದೆ.

Comments are closed.

Social Media Auto Publish Powered By : XYZScripts.com