ಕಲಬುರಗಿ : ಆಸ್ತಿ ವಿಚಾರಕ್ಕೆ ಹೊಡೆದಾಡಿಕೊಂದು ಒಂದೇ ಕುಟುಂಬದ ಮೂವರ ಸಾವು

ಕಲಬುರಗಿ : ಆಸ್ತಿ ವಿಚಾರಕ್ಕೆ ಹೊಡೆದಾಡಿಕೊಂಡು ಒಂದೇ ಕುಟುಂಬದ ಮೂವರು ಸಾವಿಗೀಡಾಗಿರುವ ಘಟನೆ ಕಲಬುರ್ಗಿ ಜಿಲ್ಲೆ ಸೇಡಂ ತಾಲೂಕಿನ ಮುಗುನೂರ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿವೆ. ಮೃತರನ್ನು ದ್ಯಾವರಾಯ 55, ಪತ್ನಿ ಕಾಳಮ್ಮ 50, ರಾಜಶೇಖರ 19, ಎಂದು ಗುರುತಿಸಲಾಗಿದೆ. ಆಸ್ತಿ ವಿವಾದಕ್ಕೆ ಸಂಬಂಧಪಟ್ಟಂತೆ ಈ ದಾಯಾದಿಗಳ ಮಧ್ಯೆ ಆಗಾಗ ಜಗಳ ನಡೆಯುತ್ತಿತ್ತು  ಎಂದು ಸಂಬಂಧಿಕರು ತಿಳಿಸಿದ್ದಾರೆ. ಸ್ಥಳಕ್ಕೆ ಸೇಡಂ ಪೊಲೀಸರು ಆಗಮಿಸಿದ್ದು, ಗಾಯಾಳುಗಳನ್ನು ಕಲಬುರಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Comments are closed.

Social Media Auto Publish Powered By : XYZScripts.com