ವೆಂಕಯ್ಯ ನಾಯ್ಡು ರಾಜೀನಾಮೆ : ಸ್ಮೃತಿಗೆ ಐಬಿ ಇಲಾಖೆ, ತೋಮರ್‌ಗೆ ನಗರಾಭಿವೃದ್ಧಿಯ ಹೊಣೆ

ದೆಹಲಿ : ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ವೆಂಕಯ್ಯ ನಾಯ್ಡು ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯಿಂದ ತೆರವುಗೊಂಡಿರುವ ಕಾರಣ ಕೇಂದ್ರ ಸಚಿವ ಸಂಪುಟದಲ್ಲಿ ಕೆಲ ಬದಲಾವಣೆ ಮಾಡಲಾಗಿದೆ. ಜವಳಿ ಸಚಿವೆ ಸ್ಮೃತಿ ಇರಾನಿಗೆ ವಾರ್ತಾ ಮತ್ತು ಪ್ರಸಾರ ಇಲಾಖೆ ಖಾತೆಯ ಜವಾಬ್ದಾರಿ ವಹಿಸಲಾಗಿದೆ. ಇನ್ನು ನಗರಾಭಿವೃದ್ಧಿ ಖಾತೆಯ ಹೊಣೆಯನ್ನು ಎನ್‌.ಎಸ್‌ ತೋಮರ್‌ಗೆ ವಹಿಸಲಾಗಿದ್ದು, ಈ ಕುರಿತು ಪ್ರಧಾನ ಮಂತ್ರಿಗಳ ಕಾರ್ಯಾಲಯ ಖಚಿತಪಡಿಸಿದೆ.

Comments are closed.