ಆಶಾಡ ಮಾಸದ ಕೊನೆ ಶುಕ್ರವಾರ : ಚಾಮುಂಡೇಶ್ವರಿಗೆ ವಿಶೇಷ ಪೂಜೆ

ಮೈಸೂರು: ಇಂದು ಆಶಾಡ ಮಾಸದ ಕೊನೆಯ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಚಾಮುಂಡೇಶ್ವರಿಗೆ ವಿಶೇ, ಪೂಜೆ ನೆರವೇರಿಸಲಾಗುತ್ತಿದೆ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರುತ್ತಿದ್ದು, ಪ್ರತೀ ಬಾರಿಯಂತೆ ಈ ಬಾರಿಯೂ ಶಕ್ತಿ ದೇವತೆಯ ದರ್ಶನ ಪಡೆಯಲು ಜನಸಾಗರವೇ ಹರಿದುಬರುತ್ತಿದೆ. ಚಾಮುಂಡೇಶ್ವರಿ ದೇವಿಗೆ ಮಹಾನ್ಯಾಸಕ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಸಹಸ್ರ ನಾಮಾರ್ಚನೆ ಪೂಜೆ ನಡೆಯುತ್ತಿದ್ದು, ಚಾಮುಂಡಿ ಬೆಟ್ಟದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ.

One thought on “ಆಶಾಡ ಮಾಸದ ಕೊನೆ ಶುಕ್ರವಾರ : ಚಾಮುಂಡೇಶ್ವರಿಗೆ ವಿಶೇಷ ಪೂಜೆ

Comments are closed.

Social Media Auto Publish Powered By : XYZScripts.com