ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಶತಸಿದ್ಧ : ಅಮಿತ್ ಶಾ

ದೆಹಲಿ : ಪರಸ್ಪರ ಮಾತುಕತೆಯ ಮೂಲಕ ಅಯೋಧ್ಯೆಯಲ್ಲಿ ಕಾನೂನು ಬದ್ದವಾಗಿ ರಾಮಮಂದಿರ ನಿರ್ಮಾಣ ಮಾಡುವುದು ಶತಸಿದ್ಧ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಹೇಳಿದ್ದಾರೆ. ಜೈಪುರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅಮಿತ್‌ ಶಾ, ರಾಮ ಮಂದಿರ ನಿರ್ಮಾಣದ ಬಗ್ಗೆ ಬಿಜೆಪಿಯ ನಿಲುವು ಸ್ಪಷ್ಟವಾಗಿದ್ದು, ಲೋಕಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಈ ವಿಷಯದ ಚರ್ಚೆಯಾಗಿತ್ತು. ಅದರಂತೆ ನಾವು ರಾಮಮಂದಿರ ನಿರ್ಮಾಣ ಮಾಡುತ್ತೇವೆ. ಮಾತುಕತೆಯ ಮೂಲಕ ಕಾನೂನು ಬದ್ದವಾಗಿಯೇ ರಾಮಮಂದಿರ ನಿರ್ಮಾಣವಾಗುತ್ತದೆ ಎಂದಿದ್ದಾರೆ. ಜೊತೆಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ 182 ಸ್ಥಾನಗಳಲ್ಲಿ ಬಿಜೆಪಿ 150 ಸ್ಥಾನಗಳನ್ನಾದರೂ ಗೆಲ್ಲುವುದು ಖಚಿತ ಎಂಬ ಭರವಸೆ ವ್ಯಕ್ತಪಡಿಸಿದ್ದಾರೆ.

 

Comments are closed.