ಬೆಂಗಳೂರು : ಬೈಕ್ – ವಾಹನ ಡಿಕ್ಕಿ, ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳ ಸಾವು

ಬೆಂಗಳೂರು : ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ದುರ್ಮರಣಕ್ಕೀಡಾಗಿದ್ಧಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕುಂದಾಣ ಚಪ್ಪರಕಲ್ಲು ರಸ್ತೆಯಲ್ಲಿ ದುರ್ಘಟನೆ ಸಂಭವಿಸಿದೆ. ಅಪಘಾತದ ನಂತರ ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಇಂದು ಬೆಳಗ್ಗೆ ಮೂರು ದ್ವಿಚಕ್ರ ವಾಹನಗಳಲ್ಲಿ ಆರು ಜನ ವಿದ್ಯಾರ್ಥಿಗಳು ನಂದಿ ಬೆಟ್ಟಕ್ಕೆ ತೆರಳುತ್ತಿದ್ದರು.

ಈ ವೇಳೆ ಒಂದು ಬೈಕಿಗೆ ಅಪರಿಚಿತ ವಾಹನ ಡಿಕ್ಕಿಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ವೀಕೆಂಡ್ ಅಂತ ನಂದಿಬೆಟ್ಟಕ್ಕೆ ತೆರಳುತ್ತಿದ್ದ ವೇಳೆ ನಡೆದ ಘಟನೆ ನಡೆದಿದೆ. ಸ್ಥಳಕ್ಕೆ ವಿಶ್ವನಾಥಪುರ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Comments are closed.

Social Media Auto Publish Powered By : XYZScripts.com