ಕಲಬುರ್ಗಿ : ರೌಡಿಶೀಟರ್ ಮಲ್ಲಿಕಾರ್ಜುನ ಅಲಿಯಾಸ್ ಕರಿಚಿರತೆ ಪೋಲೀಸ್ ಎನ್ ಕೌಂಟರ್ ಗೆ ಬಲಿ

ರೌಡಿಶಿಟರ್ ಮಲ್ಲಿಕಾರ್ಜುನ ಅಲಿಯಾಸ್ ಕರಿಚಿರತೆ ಪೊಲಿಸರಿಂದ ಎನಕೌಂಟರ್ ನಲ್ಲಿ ಮೃತಪಟ್ಟಿದ್ದಾನೆ. ಪೊಲೀಸರ ಎನ್ ಕೌಂಟರ್ ನಲ್ಲಿ ಕರಿ ಚಿರತೆ ಸಾವನ್ನಪ್ಪಿದ್ದಾನೆ. ಕಲಬುರಗಿ ಜಿಲ್ಲೆಯ ಕೆಸರಟಗಿ ಬಳಿಯ ನಾಗೇನಹಳ್ಳಿ ಬಳಿಯ ಆಶ್ರಯ ಕಾಲೋನಿ ಬಳಿ ಘಟನೆ ನಡೆದಿದೆ. ಕರಿ ಚಿರತೆ ಅಲಿಯಾಸ್ ಮಲ್ಲಿಕಾರ್ಜುನ ಆಶ್ರಯ ಮನೆಯಲ್ಲಿ ಅಡಗಿ ಕುಳಿತಿದ್ದ.

 

ಇತ್ತೀಚೆಗೆ ನಡೆದ ವ್ಯಕ್ತಿಯ ಅಪಹರಣ ಮತ್ತು ಕೊಲೆ ಪ್ರಕರಣದ ಪ್ರಮುಖ ಆರೊಪಿಯಾಗಿದ್ದ ಮಲ್ಲಿಕಾರ್ಜುನ ಪೊಲೀಸರಿಂದ ತಲೆಮರೆಸಿಕೊಂಡು ತಿರುಗುತ್ತಿದ್ದ. ಕೊನೆಗೂ ಪೊಲೀಸ್ ಎನ್ ಕೌಂಟರ್ ನಲ್ಲಿ ಬಲಿಯಾಗಿದ್ದಾನೆ.
ತೀವ್ರವಾಗಿ ಗಾಯಗೊಂಡಿದ್ದ ಕರಿ ಚಿರತೆಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಜಿಲ್ಲಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

Comments are closed.