ತನ್ನ ವಿರುದ್ಧ ದನಿ ಎತ್ತುವವರ ಮೇಲೆ ಬಿಜೆಪಿ ಐಟಿ ದಾಳಿ ಎಂಬ ಬ್ರಹ್ಮಾಸ್ತ್ರ ಪ್ರಯೋಗಿಸುತ್ತಿದೆ : ಸಿಎಂ

ಬೆಂಗಳೂರು :ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಗುರಿಯಾಗಿಸಿಕೊಂಡು ಆದಾಯ ತೆರಿಗೆ ಅಧಿಕಾರಿಗಳು ನಡೆಸಿರುವ ದಾಳಿ ಸಂಪೂರ್ಣ ರಾಜಕೀಯ ಪ್ರೇರಿತ. ಇದರ ಹಿಂದೆ ಕೇಂದ್ರ ಸರ್ಕಾರದ ಕೈವಾಡ ಇರುವುದು ಜಗಜ್ಜಾಹೀರಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ತನ್ನ ರಾಜಕೀಯ ಷಡ್ಯಂತ್ರಕ್ಕೆ ಆದಾಯ ತೆರಿಗೆ ಇಲಾಖೆಯನ್ನು ಬಳಸಿಕೊಳ್ಳುವುದು ಕೇಂದ್ರ ಸರ್ಕಾರಕ್ಕೆ ಶೋಭೆ ತರುವುದಿಲ್ಲ. ಇಂತಹ ಬೆದರಿಕೆ ತಂತ್ರಗಳಿಗೆ ಬಗ್ಗುವುದೂ ಇಲ್ಲ. ದಾಳಿ ಸಂದರ್ಭದಲ್ಲಿ ನಿಯಮಾನುಸಾರ ಐಟಿ ಅಧಿಕಾರಿಗಳು ಸ್ಥಳೀಯ ಪೊಲೀಸರ ನೆರವು ಪಡೆದುಕೊಳ್ಳಬೇಕು.

ಆದರೆ ನಿಯಮ ಉಲ್ಲಂಘಿಸಿ. ಸಿಆರ್ ಪಿಎಫ್ ಸಿಬ್ಬಂದಿಯನ್ನು ಬಳಸಿಕೊಳ್ಳಲಾಗಿದೆ. ಐಟಿ ಅಧಿಕಾರಿಗಳು ನಿಯಮಾನುಸಾರ ದಾಳಿ ಮಾಡಿ ತನಿಖೆ ನಡೆಸಲಿ. ಇದರಿಂದ ಜನತೆಗೆ ಸತ್ಯ ತಿಳಿಯಲಿ.‌ ಆದರೆ ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಈ ರೀತಿಯ ದಾಳಿ ನಡೆಸಿದರೆ ಮುಂದೆ ಜನತೆ ತಕ್ಕ ಪಾಠ ಕಲಿಸುತ್ತಾರೆ. ತನ್ನ ವಿರುದ್ಧ ಧ್ವನಿ ಎತ್ತುವವರ ಮೇಲೆ ಬಿಜೆಪಿ ಐಟಿ ದಾಳಿ ಎಂಬ ಬ್ರಹ್ಮಾಸ್ತ್ರ ಪ್ರಯೋಗ ಮಾಡುತ್ತಿದೆ. ಇದು ಪ್ರಜಾಪ್ರಭುತ್ವ ವಿರೋಧಿ ಧೋರಣೆ ಎಂದು ಗುಡುಗಿದ್ದಾರೆ.

Comments are closed.

Social Media Auto Publish Powered By : XYZScripts.com