ಚಿತ್ರದುರ್ಗ : ಕೆಟ್ಟು ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಸ್ಥಳದಲ್ಲೇ ಇಬ್ಬರೂ ಚಾಲಕರ ಸಾವು

ಚಿತ್ರದುರ್ಗ: ನಿಂತಿದ್ದ ಲಾರಿಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಇಬ್ಬರು  ಚಾಲಕರು ದುರ್ಮರಣಕ್ಕೀಡಾಗಿದ್ಧಾರೆ. 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕಿನ ಬಿಜಿ ಕೆರೆ ಸಮೀಪದ ಹೊಸಕೆರೆ ಸೇತುವೆ ಬಳಿ ಘಟನೆ ನಡೆದಿದೆ. ಲಾರಿ ಹಾಗೂ ಬಸ್ ನ ಇಬ್ಬರೂ ಚಾಲಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು ಬಳ್ಳಾರಿ, ಚಿತ್ರದುರ್ಗ ಚಳ್ಳಕೆರೆ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಮೊಳಕಾಲ್ಮೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಯಚೂರು ಮೂಲದ ನಾಗಗೌಡ (30) ಮೃತ ಬಸ್ ಚಾಲಕ, ಮತ್ತೋರ್ವನ ಗುರುತು ಪತ್ತೆಯಾಗಿಲ್ಲ. ಕೆಟ್ಟು ನಿಂತಿದ್ದ ಮಹರಾಷ್ಟ್ರ ಮೂಲದ  ಲಾರಿಗೆ ಸರ್ಕಾರಿ ಬಸ್ ಡಿಕ್ಕಿ ಸಂಭವಿಸಿತ್ತು.

One thought on “ಚಿತ್ರದುರ್ಗ : ಕೆಟ್ಟು ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಸ್ಥಳದಲ್ಲೇ ಇಬ್ಬರೂ ಚಾಲಕರ ಸಾವು

Comments are closed.