69ನೇ ವಸಂತಕ್ಕೆ ಕಾಲಿಟ್ಟ ಸಿಎಂ ಸಿದ್ದರಾಮಯ್ಯ : ಹುಟ್ಟುಹಬ್ಬ ಆಚರಿಸದಂತೆ ಅಭಿಮಾನಿಗಳಿಗೆ ಸೂಚನೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು 69ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಆದರೆ ಈ ಬಾರಿ ರಾಜ್ಯದಲ್ಲಿ ಉಂಟಾಗಿರುವ ಬರಗಾಲ ಹಿನ್ನೆಲೆಯಲ್ಲಿ ಹುಟ್ಟು ಹಬ್ಬ ಆಚರಣೆಯಿಂದ ಸಿಎಂ ದೂರ ಉಳಿದಿದ್ದು, ತಮ್ಮ ಹುಟ್ಟು ಹಬ್ಬ ಆಚರಿಸದಂತೆ ಅಭಿಮಾನಿಗಳಿಗೆ, ಕಾರ್ಯಕರ್ತರಿಗೆ ಸೂಚಿಸಿದ್ದಾರೆ.

ಆದರೂ ಅಭಿಮಾನಿಗಳು ಸಿಎಂ ಹುಟ್ಟು ಹಬ್ಬ ಆಚರಣೆ ಮಾಡಿದದ್ು, ರಾಜ್ಯದೆಲ್ಲೆಡೆ ಸಿದ್ದರಾಮಯ್ಯ ಅವರ ಫ್ಲೆಕ್ಸ್‌ ಹಾಕಿ ಶುಭಾಷಯ ಕೋರಿದ್ದಾರೆ.

ಇಂದು ರಾಯಚೂರಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಬೃಹತ್‌ ಸಭೆ ನಡೆಯಲಿದ್ದು, ಈ ಸಭೆಗೆ ಸಿಎಂ ತೆರಳಿದ್ದಾರೆ. ಇಂದು ಬಳ್ಳಾರಿಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ಆಗಮಿಸಲಿದ್ದು, ಅವರನ್ನು ಸ್ವಾಗತಿಸಿದ ಬಳಿಕ ಬಳ್ಳಾರಿಯಿಂದ ರಾಯಚೂರಿನೆಡೆಗೆ ಪ್ರಯಾಣ ಬೆಳೆಸಿದ್ದಾರೆ.

 

 

Comments are closed.

Social Media Auto Publish Powered By : XYZScripts.com