ರಾಷ್ಟ್ರೀಯ ಕಾಂಗ್ರೆಸ್‌ ಕಾರ್ಯಾಧ್ಯಕ್ಷರಾಗಿ ಪ್ರಿಯಾಂಕ ಗಾಂಧಿ ಆಯ್ಕೆ ?

ದೆಹಲಿ : ರಾಷ್ಟ್ರೀಯ ಕಾಂಗ್ರೆಸ್‌ನಲ್ಲಿ  ಬದಲಾವಣೆಯ ಕಾಲ ಸನ್ನಿಹಿತವಾಗಿದೆ. ಸದ್ಯದಲ್ಲೇ ರಾಷ್ಟ್ರೀಯ ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಸೋನಿಯಾ  ಗಾಂಧಿ ಪುತ್ರಿ ಪ್ರಿಯಾಂಕ ಗಾಂಧಿ ನೇಮಕವಾಗುವ ಕುರಿತು ಸೋನಿಯಾ ಗಾಂಧಿ ಸೂಚನೆ ನೀಡಿದ್ದಾರೆ.

ಆಗಸ್ಟ್‌ 8ರಂದು ಕ್ವಿಟ್ ಇಂಡಿಯಾ ಚಳುವಳಿಯ ದಿನ ನಡೆದ ಸಭೆಯಲ್ಲಿ ಪ್ರಿಯಾಂಕ ಅವರನ್ನು ಪಕ್ಷದ ನೂತನ ಅಧ್ಯಕ್ಷರನ್ನಾಗಿ ಮಾಡುವ ಸುಳಿವು ನೀಡಿದ್ದರು ಎಂದು ತಿಳಿದುಬಂದಿದೆ.ಅಲ್ಲದೆ ಸೋನಿಯಾ ಅವರ ನಿರ್ಧಾರಕ್ಕೆ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಸೇರಿದಂತೆ ಹಲವು ಹಿರಿಯ ಮುಖಂಡರು ಬೆಂಬಲ ವ್ಯಕ್ತಪಡಿಸಿರುವುದಾಗಿ ಮೂಲಗಳು  ತಿಳಿಸಿವೆ. ಜೊತೆಗೆ ಇನ್ನೊಂದು ತಿಂಗಳ ಒಳಗೆ ಪಕ್ಷದ ಅಧ್ಯಕ್ಷರಾಗಿ ಪ್ರಿಯಾಂಕ ಅಧಿಕಾರ ವಹಿಸಿಕೊಳ್ಳುತ್ತಾರೆ ಎಂಬಂತಹ ಮಾತುಗಳು ಕೇಳಿಬರುತ್ತಿವೆ.

ಕಳೆದ ಕೆಲ ವರ್ಷಗಳಿಂದ ಪ್ರಿಯಾಂಕ ಗಾಂಧಿ ಅವರನ್ನು ಪಕ್ಷದ ಅಧ್ಯಕ್ಷೆಯನ್ನಾಗಿ ಮಾಡಬೇಕೆಂಬ ಮಾತುಗಳು ಕೇಳಿಬರುತ್ತಿದ್ದವು. ಆದರೆ ಈ ವಿಚಾರವಾಗಿ ಸೋನಿಯಾ ಗಾಂಧಿ ಹೆಚ್ಚಾಗಿ ತಲೆಕೆಡಿಸಿಕೊಂಡಿರಲಿಲ್ಲ. ಅಲ್ಲದೆ ಪ್ರಿಯಾಂಕ ಸಹ ರಾಜಕೀಯದಿಂದ ಸ್ವಲ್ಪ ದೂರ ಉಳಿದಿದ್ದರು. ಆದರೆ ಈಗ ಮತ್ತೆ ಪ್ರಿಯಾಂಕ ರಾಜಕೀಯಕ್ಕೆ ಬರುತ್ತಾರೆ ಎಂಬ ಮಾತು, ಕಾಂಗ್ರೆಸ್ಸಿಗರಲ್ಲಿ ಹೆಚ್ಚಿನ ವಿಶ್ವಾಸ ಮೂಡುವಂತೆ ಮಾಡಿದೆ.

Comments are closed.

Social Media Auto Publish Powered By : XYZScripts.com