ರಾಜ್ಯ ಸರ್ಕಾರ ಎಸಿಬಿ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ : ಸಿ ಸಿ ಪಾಟೀಲ್

ಗದಗ : ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿರೋ ವೇಳೆ ಮಹಿಳಾ ಕಾರ್ಯಕರ್ತರು ಸಿಎಂ ಭಾವಚಿತ್ರಕ್ಕೆ ಚಪ್ಪಲಿ ಸೇವೆ ಮಾಡಿ, ಹಣೆಗೆ ಬೊಟ್ಟು ಮತ್ತು ಮೂಗಿಗೆ ಮೂಗುತಿ ಚಿತ್ರ ಬಿಡಿಸಿದ ಘಟನೆ ಗದಗನಲ್ಲಿ ನಡೆದಿದೆ.

ಬೆಂಗಳೂರಿನ ಶಿವರಾಮ ಕಾರಂತ ಬಡಾವಣೆಯ ಡಿನೋಟಿಫಿಕೇಷನ್ ವಿಚಾರದಲ್ಲಿ ಸುಳ್ಳು ಸಾಕ್ಷಿ ಹೇಳುವಂತೆ ರಾಜ್ಯ ಸರ್ಕಾರ ಅಧಿಕಾರಿ ಬಸವರಾಜ್ ಮೇಲೆ ಒತ್ತಡ ಹಾಕಿದ್ದು, ಇದು ಯಡಿಯೂರಪ್ಪ ವಿರುದ್ಧ ರಾಜ್ಯ ಸರ್ಕಾರ ಮಾಡುತ್ತಿರೋ ದ್ವೇಷದ ರಾಜಕಾರಣ ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದರು.

ಈ ಪ್ರತಿಭಟನೆಯ ವೇಳೆ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ನೂರಾರು ಬಿಜೆಪಿ ಕಾರ್ಯಕರ್ತರು ಗದಗ ನಗರದ ಮಹಾತ್ಮಾಗಾಂಧಿ ವೃತ್ತದ ಬಳಿ ಟೈರ್‍ಗೆ ಬೆಂಕಿ ಹಚ್ಚಿ, ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ಮುಗಿಸುವಂತೆ ಪೊಲೀಸರು ಗಣ ಕಾರ್ಯಕರ್ತರ ಬಳಿ ಮನವಿ ಮಾಡಿದಾಗ, ನೀವೆಲ್ಲಾ ಗದಗ ಉಸ್ತುವಾರಿ ಸಚಿವ ಹೆಚ್ ಕೆ ಪಾಟೀಲ್ ಪರವಾಗಿ ಕೇಲಸ ಮಾಡ್ತಿದ್ದೀರೆಂದು ಆರೋಪಿಸಿ, ಸಚಿವ ಹೆಚ್ ಕೆ ಪಾಟೀಲ್ ವಿರುದ್ಧವೂ ಡೌನ್ ಡೌನ್ ಹೆಚ್ ಕೆ ಎಂದು ಘೋಷಣೆ ಕೂಗಿದ್ರು. ಗದಗ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ ಸಿ ಪಾಟೀಲ್ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಮಾಜಿ ಶಾಸಕ ರಾಮಣ್ಣ ಲಮಾಣಿ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಭಾಗವಹಿಸಿದರು.

ಈ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಸಿ ಸಿ ಪಾಟೀಲ್ ರಾಜ್ಯ ಸರ್ಕಾರ ಎಸಿಬಿ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.

Comments are closed.

Social Media Auto Publish Powered By : XYZScripts.com