ಅಕ್ರಮ ಡಿನೋಟಿಫಿಕೇಶನ್‌ ಪ್ರಕರಣ : ಬಿಎಸ್‌ವೈಗೆ ತಾತ್ಕಾಲಿಕ ರಿಲೀಫ್‌

ಬೆಂಗಳೂರು : ಶಿವರಾಮ ಕಾರಂತ ಬಡಾವಣೆಯ ಅಕ್ರಮ ಡಿ ನೋಟಿಫಿಕೇಶನ್‌ ಪ್ರಕರಣ ಸಂಬಂಧ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ. ಡಿನೋಟಿಫಿಕೇಶನ್ ಪ್ರಕರಣ ಸಂಬಂಧ ಎಸಿಬಿ ಮುಂದೆ ಗುರುವಾರದೊಳಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು.

ಆದರೆ ಹೈಕೋರ್ಟ್‌ ಮುಂದಿನ ವಿಚಾರಣೆಯವರೆಗೂ ಯಡಿಯೂರಪ್ಪ ಅವರನ್ನು ಬಂಧಿಸಬಾರದು ಎಂದು ಆದೇಶಿಸಿದ್ದು, ಈ ಹಿನ್ನೆಲೆಯಲ್ಲಿ ನೋಟಿಸನ್ನು ವಾಪಸ್‌ ಪಡೆದಿದ್ದಾರೆ. ಮುಂದಿನ ವಿಚಾರಣೆಯನ್ನು ನ್ಯಾಯಾಲಯ ಆಗಸ್ಟ್‌ 28ಕ್ಕೆ ಮುಂದೂಡಿದೆ.

ಶಿವರಾಮ ಕಾರಂತ ಬಡಾವಣೆಯ ಡಿನೋಟಿಫಿಕೇಶನ್‌ ಪ್ರಕರಣ ಸಂಬಂಧ ಬಿಎಸ್‌ವೈ ವಿರುದ್ದ ಎಸಿಬಿಯಲ್ಲಿ 2 ಪ್ರಕರಣ ದಾಖಲಾಗಿದ್ದು, ಎಫ್‌ಐಆರ್ ದಾಖಲಿಸಿದ್ದರು. ತಮ್ಮ ಮೇಲಿನ ಎಫ್ಐಆರ್‌ ವಜಾಗೊಳಿಸುವಂತೆ ಬಿಎಸ್‌ವೈ ಹೈಕೋರ್ಟ್ ಮೊರೆಹೋಗಿದ್ದು, ಸದ್ಯಕ್ಕೆ ರಿಲೀಫ್‌ ಸಿಕ್ಕಿದೆ.

 

Comments are closed.

Social Media Auto Publish Powered By : XYZScripts.com