ಶಿವಮೊಗ್ಗ : ಲಾರಿ – ಕಾರ್ ಡಿಕ್ಕಿ, 6 ಜನರ ಸಾವು, ಓರ್ವನಿಗೆ ಗಂಭೀರ ಗಾಯ

ಶಿವಮೊಗ್ಗ ತಾಲೂಕಿನ ಆಯನೂರು ಸಮೀಪ ಲಿಕ್ಕರ್ ತುಂಬಿದ ಲಾರಿ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಆರು ಮಂದಿ ಮೃತಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಹೊಸನಗರ ತಾಲೂಕು ಬ್ರಹ್ಮೇಶ್ವರದಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಕಾರು ಹಾಗೂ ಬೆಂಗಳೂರಿನಿಂದ ಸಾಗರಕ್ಕೆ ಮದ್ಯ ತುಂಬಿಕೊಂಡು ಹೋಗುತ್ತಿದ್ದ ಲಾರಿ ನಡುವೆ ಸಂಭವಿಸಿದ ಅಪಘಾತದಿಂದ ಈ ದುರ್ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಬ್ರಹ್ಮೇಶ್ವರದ ಅಶೋಕ್, ಕಿರಣ್, ಕಾರ್ತಿಕ್, ನವೀನ, ಕೇಶವ, ಮಾರಿಮುತ್ತು ಮೃತಪಟ್ಟಿದ್ದು ಸಂತೋಷ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ. ಕ್ಯಾಂಟರ್ ಚಾಲಕನೂ ಗಂಭೀರವಾಗಿ ಗಾಯಗೊಂಡಿದ್ದು ಗಾಯಾಳುಗಳನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕುಂಸಿಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Comments are closed.

Social Media Auto Publish Powered By : XYZScripts.com