ಬೆಂಗಳೂರಿನಲ್ಲಿ ವರುಣನ ಆರ್ಭಟ : ಧರೆಗುರುಳಿದ ಮರಗಳು, ವಿದ್ಯುತ್‌ ಸಂಪರ್ಕ ಕಡಿತ

ಬೆಂಗಳೂರು : ಬೆಂಗಳೂರಿನಲ್ಲಿ ವರುಣನ ಆರ್ಭಟ ಮುಂದುವರಿದಿದೆ. ನಿನ್ನೆ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಜನಜೀವನ ಅಸ್ಥವ್ಯಸ್ಥವಾಗಿದ್ದು, ಜಯನಗರದ ನಾಲ್ಕನೇ ಬ್ಲಾಕ್‌ನಲ್ಲಿ ಮರದ ಬೃಹತ್‌ ಕೊಂಬೆ ಮುರಿದು ರಸ್ತೆಯ ಮೇಲೆ ಬಿದ್ದಿದೆ.

ವಾಹನ ಮತ್ತು ಜನಸಂಚಾರಕ್ಕೆ ಅಡ್ಡಿಯಾದ ಮರದ ಕೊಂಬೆಯನ್ನು ಬಿಬಿಎಂಪಿ ಸಿಬ್ಬಂದಿ ತೆರವುಗೊಳಿಸುತ್ತಿದ್ದಾರೆ. ಬೆಳಗ್ಗೆ ಎಂಟು ಗಂಟೆಯಿಂದ ಮರವನ್ನು ತೆರವುಗೊಳಿಸಲು ಹರಸಾಹಸ ಪಡುತ್ತಿದ್ದಾರೆ. ಇಡೀ ರಸ್ತೆಯಲ್ಲಿ ನಿನ್ನೆ ರಾತ್ರಿಯಿಂದ ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ. ಶಾಂತಿನಗರ, ಮಲ್ಲೇಶ್ವರಂ, ಲಿಂಗರಾಜಪುರಂ ಸೇರಿದಂತೆ ಹಲವೆಡೆ ಭಾರೀ ಮಳೆ ಸುರಿದಿದ್ದು, ಸದ್ಯ ಪರಿಸ್ಥಿತಿ ಸುಧಾರಿಸುತ್ತಿದೆ.

 

One thought on “ಬೆಂಗಳೂರಿನಲ್ಲಿ ವರುಣನ ಆರ್ಭಟ : ಧರೆಗುರುಳಿದ ಮರಗಳು, ವಿದ್ಯುತ್‌ ಸಂಪರ್ಕ ಕಡಿತ

  • October 20, 2017 at 9:48 PM
    Permalink

    Great write-up, I am regular visitor of one’s web site, maintain up the nice operate, and It’s going to be a regular visitor for a long time. .Sיjours en Grece

Comments are closed.

Social Media Auto Publish Powered By : XYZScripts.com