WATCH : ಕಿಚ್ಚನ ಹುಟ್ಟುಹಬ್ಬಕ್ಕೆ ರಿಲೀಸ್ ಆಯ್ತು ವಿಲನ್ನ ಮೋಶನ್ ಪೋಸ್ಟರ್..
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹಾಗೂ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ದಿ ವಿಲನ್ನ ಮೋಶನ್ ಪೋಸ್ಟರ್ ರಿಲೀಸ್ ಆಗಿದೆ. ಇಬ್ಬರು ಘಟಾನುಘಟಿ ಕಲಾವಿದರು ಅಭಿನಯಿಸಿರುವ ಸಿನಿಮಾ ಅಭಿಮಾನಿಗಳಲ್ಲಿ ಮತ್ತಷ್ಟು ನಿರೀಕ್ಷೆ ಹೆಚ್ಚುವಂತೆ ಮಾಡಿದೆ. ತನ್ವಿ ಸಾನ್ವಿ ಫಿಲ್ಸ್ನಡಿ ಸಿನಿಮಾ ನಿರ್ಮಾಣವಾಗುತ್ತಿದ್ದು, ಸಿ.ಆರ್ ಮನೋಹರ್ ನಿರ್ಮಾಣ ಮಾಡುತ್ತಿರುವ ಚಿತ್ರಕ್ಕೆ ಪ್ರೇಮ್ ನಿರ್ದೇಶನವಿದೆ. ಜೊತೆಗೆ ಅರ್ಜುನ್ ಜನ್ಯ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಪೋಸ್ಟರ್ನಿಂದಲೇ ಅಭಿಮಾನಿಗಳು ಹುಚ್ಚೆದ್ದು ಕುಣಿಯುವಂತೆ ಮಾಡಿದ್ದ ಸಿನಿಮಾ ತಂಡ ಈಗ ಮೋಶನ್ ಪೋಸ್ಟರ್ ರಿಲೀಸ್ ಮಾಡಿದ್ದು, ಅಭಿಮಾನಿಗಳಲ್ಲಿ ಕುತೂಹಲ ಕೆರಳಿಸಿದೆ.
Cout Du Levitra 20mg Mejor Ora Para Tomar Propecia viagra Propecia Forehead Some