ಜೆಡಿಎಸ್‌ನ ಬಂಡಾಯ ಶಾಸಕರು ಡಿಸೆಂಬರ್‌ನಲ್ಲಿ ಕಾಂಗ್ರೆಸ್‌ ಸೇರ್ಪಡೆ : ಜಮೀರ್ ಅಹಮದ್

ರಾಮನಗರ :  ಕಾರ್ಯಕ್ರಮದ ನಿಮಿತ್ತ ಮೈಸೂರಿಗೆ ತೆರಳುತ್ತಿದ್ದ ಜಮೀರ್‌ ಅಹಮದ್‌ ಮಾರ್ಗ ಮಧ್ಯೆ ಜೆಡಿಎಸ್‌ನ ಕೆಲ ನಗರ ಸಭಾ ಸದಸ್ಯರು ಹಾಗೂ ಮುಖಂಡರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಇದೇ ವೇಳೆ ಹೇಳಿಕೆ ನೀಡಿರುವ ಜಮೀರ್ ಅಹಮದ್‌, ಜೆಡಿಎಸ್ ನಿಂದ ಅನಿತಾ ಕುಮಾರಸ್ವಾಮಿ ಅವರು ಚನ್ನಪಟ್ಟಣದಲ್ಲಿ ಅಭ್ಯರ್ಥಿಯಾಗಿ ನಿಲ್ಲುವ ಬಗ್ಗೆ ಮಾಹಿತಿ ಇಲ್ಲ. ನಮ್ಮ ಕುಟುಂಬದಿಂದ ಕುಮಾರಸ್ವಾಮಿ ಹಾಗೂ ರೇವಣ್ಣ ಮಾತ್ರ ಸ್ಪರ್ಧೆ ಮಾಡುತ್ತಾರೆ ಎಂದು ಕಳೆದ ಬಾರಿ ದೇವೇಗೌಡರೇ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ಈಗ ಅನಿತಾ ಕುಮಾರಸ್ವಾಮಿ ನಿಲ್ಲುವುದಾಗಿ ಹೇಳಲಾಗುತ್ತಿದೆ. ಇದರ ಬಗ್ಗೆ ನನಗೆ ಗೊತ್ತಿಲ್ಲ. ಜೆಡಿಎಸ್‌ನ ಎಲ್ಲಾ ಬಂಡಾಯ ಶಾಸಕರೂ ಡಿಸೆಂಬರ್‌ನಲ್ಲಿ ಅಧಿಕೃತವಾಗಿ ಕಾಂಗ್ರೆಸ್‌ ಸೇರಲಿದ್ದೇವೆ. ನನ್ನ ಸ್ವಕ್ಷೇತ್ರ ಚಾಮರಾಜಪೇಟೆಯಿಂದ ನಾನು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದೇನೆ ಎಂದು ಹೇಳಿದ್ದಾರೆ.

 

 

One thought on “ಜೆಡಿಎಸ್‌ನ ಬಂಡಾಯ ಶಾಸಕರು ಡಿಸೆಂಬರ್‌ನಲ್ಲಿ ಕಾಂಗ್ರೆಸ್‌ ಸೇರ್ಪಡೆ : ಜಮೀರ್ ಅಹಮದ್

  • October 20, 2017 at 9:47 PM
    Permalink

    Such a well written post.. Thnkx for sharing this post !! Also you can check my ??

Comments are closed.

Social Media Auto Publish Powered By : XYZScripts.com