ಎಐಎಡಿಎಂಕೆ ಪಕ್ಷದಿಂದ ಶಶಿಕಲಾ, ಟಿಟಿವಿ ದಿನಕರನ್‌ ಉಚ್ಛಾಟನೆ !

ಚೆನ್ನೈ : ತಮಿಳುನಾಡಿನ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ಎಂಬಂತೆ ಎಐಎಡಿಎಂಕೆ ಪಕ್ಷದಿಂದ ಶಶಿಕಲಾ ಹಾಗೂ ಟಿಟಿವಿ ದಿನಕರನ್‌ ಅವರನ್ನು ವಜಾ ಮಾಡಲಾಗಿದೆ. ಚೆನ್ನೈನಲ್ಲಿ ನಡೆದ ಎಐಎಡಿಎಂಕೆಯ ಸಾಮಾನ್ಯ ಸಭೆಯಲ್ಲಿ ಶಶಿಕಲಾ ಹಾಗೂ ಟಿಟಿವಿ ದಿನಕರನ್‌ ಅವರನ್ನು ಪಕ್ಷದಿಂದ ಉಚ್ಛಾಟಿಸಲು ಎಲ್ಲಾ ಶಾಸಕರು ಒಪ್ಪಿಗೆ ಸೂಚಿಸಿದ್ದು,

ಈ ಹಿನ್ನೆಲೆಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಶಶಿಕಲಾ ಅವರನ್ನು ಹಾಗೂ ಉಪಕಾರ್ಯದರ್ಶಿ ಹುದ್ದೆಯಿಂದ ದಿನಕರನ್‌ ಅವರನ್ನೂ ಉಚ್ಛಾಟಿಸಲಾಗಿದೆ. ಇದೇ ವೇಳೆ ದಿವಂಗತ ಜೆ. ಜಯಲಲಿತಾ ಅವರೇ ಪಕ್ಷದ ಶಾಶ್ವತ ಕಾರ್ಯದರ್ಶಿ ಎಂದೂ ಘೋಷಿಸಲಾಗಿದ್ದು, ಜಯಲಲಿತಾ ಅಧಿಕಾರದಲ್ಲಿದ್ದಾಗ ನೇಮಕಗೊಂಡಿದ್ದವರೇ ಸಚಿವರಾಗಿ ಮುಂದುವರಿಯಲಿದ್ದಾರೆ ಎಂದೂ ಘೋಷಿಸಿದ್ದಾರೆ.

ಎಐಎಡಿಎಂಕೆ ಪಕ್ಷ ಸಾಮಾನ್ಯ ಸಭೆ ನಡೆಸುವುದಕ್ಕೆ ತಡೆಯೊಡ್ಡಿ ಟಿಟಿವಿ ದಿನಕರನ್‌ ಮದ್ರಾಸ್‌ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಆದರೆ ಈ ಅರ್ಜಿಯನ್ನು ವಜಾ ಗೊಳಿಸಿದ್ದ ಹೈಕೋರ್ಟ್‌ ಸಾಮಾನ್ಯ ಸಭೆ ನಡೆಸಲು ಒಪ್ಪಿಗೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಇಬ್ಬರನ್ನೂ ಪಕ್ಷದಿಂದ ವಜಾ ಮಾಡಲಾಗಿದ್ದು, ಶಶಿಕಲಾ ರಾಜಕೀಯ ಜೀವನ ಅಂತ್ಯಗೊಳ್ಳುವ ಹಂತ ತಲುಪಿದೆ.

 

Comments are closed.

Social Media Auto Publish Powered By : XYZScripts.com