IND vs AUS 1st Odi : ಹಾರ್ದಿಕ್ ಪಾಂಡ್ಯ ಆಲ್ರೌಂಡ್ ಆಟ ; ಭಾರತಕ್ಕೆ 26 ರನ್ ಜಯ

ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ಭಾರತ ಆಸ್ಟ್ರೇಲಿಯಾ ನಡುವೆ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತ 26 ರನ್ ಜಯಗಳಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಭಾರತ ನಿಗದಿತ 50 ಓವರುಗಳಲ್ಲಿ 7 ವಿಕೆಟ್ ಕಳೆದುಕೊಂಡು 281 ರನ್ ಗಳಿಸಿತು. ನಾಯಕ ವಿರಾಟ್ ಕೊಹ್ಲಿ ಹಾಗೂ ಮನೀಶ್ ಪಾಂಡೆ ಶೂನ್ಯಕ್ಕೆ ಔಟಾದರೆ, ಅಜಿಂಕ್ಯ ರಹಾನೆ ಕೇವಲ 5 ರನ್ ಗಳಿಸಿದರು. ಧೋನಿ (79) ಹಾಗೂ ಹಾರ್ದಿಕ್ ಪಾಂಡ್ಯ (83) ಸೇರಿ 6ನೇ ವಿಕೆಟ್ ಗೆ 118 ರನ್ ಜೊತೆಯಾಟವಾಡಿದರು.

Image result for hardik pandya chennai aus

Image result for hardik pandya chennai aus

Image result for hardik pandya chennai aus

ಮಳೆ ಅಡ್ಡಿಪಡಿಸಿದ ಕಾರಣ ಡಕ್ವರ್ಥ್ ಲೂಯಿಸ್ ನಿಯಮದ ಪ್ರಕಾರ ಆಸ್ಟ್ರೇಲಿಯಾ ತಂಡಕ್ಕೆ 21 ಓವರುಗಳಲ್ಲಿ 164 ರನ್ ಟಾರ್ಗೆಟ್ ನೀಡಲಾಗಿತ್ತು. ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ತಂಡ 21 ಓವರ್ಗಳಲ್ಲಿ 137 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಕೊಂಡಿತು. ಭಾರತದ ಪರ ಯಜುವೇಂಧ್ರ ಚಹಲ್ 3, ಹಾರ್ದಿಕ್ ಪಾಂಡ್ಯ 2, ಕುಲದೀಪ್ ಯಾದವ್ 2 ವಿಕೆಟ್ ಪಡೆದರು. 5 ಪಂದ್ಯಗಳ ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿದೆ.

Comments are closed.