ಕಾರು ಅಪಘಾತ : ಪ್ರಾಣಾಪಾಯದಿಂದ ಪಾರಾದ ಮಾಜಿ ಸಂಸದ ಎಚ್‌. ವಿಶ್ವನಾಥ್‌ ಪುತ್ರ

ಮೈಸೂರು: ಮಾಜಿ ಸಂಸದ ಅಡಗೂರು ಎಚ್.ವಿಶ್ವನಾಥ್ ರ ಪುತ್ರ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಕಳೆದ ತಡರಾತ್ರಿ ನಡೆದಿದ್ದು, ವಿಶ್ವನಾಥ್‌ ಪುತ್ರ ಪೂರ್ವಜ್ ವಿಶ್ವನಾಥ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನಿನ್ನೆ ರಾತ್ರಿ ಪೂರ್ವಜ್‌ ಕಾರ್ಯನಿಮಿತ್ತ ಚಂದಗಾಲು ಗ್ರಾಮಕ್ಕೆ ಹೊರಟಿದ್ದು, ಮೈಸೂರು ಜಿಲ್ಲೆ ಕೆ.ಆರ್‌. ನಗರ ಪಟ್ಟಣದ ಹೊರವಲಯದಲ್ಲಿ ಕಾರು ಹಾಗೂ ಆಲೂಗೆಡ್ಡೆ ತುಂಬಿದ್ದ ಆಟೋ ಮಧ್ಯೆ ಡಿಕ್ಕಿಯಾಗಿದೆ. ಎರಡೂ ವಾಹನಗಳೂ ಸಂಪೂರ್ಣ ಜಖಂಗೊಂಡಿದ್ದು, ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆ.ಆರ್‌ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.