ಅಕ್ರಮ ಡಿನೋಟಿಫಿಕೇಶನ್‌ ಪ್ರಕರಣ : ಬಿಎಸ್‌ವೈಗೆ ತಾತ್ಕಾಲಿಕ ರಿಲೀಫ್‌

ಬೆಂಗಳೂರು : ಶಿವರಾಮ ಕಾರಂತ ಬಡಾವಣೆಯ ಅಕ್ರಮ ಡಿನೋಟಿಫಿಕೇಶನ್‌ ಪ್ರಕರಣ ಸಂಬಂಧ ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ಅವರಿಗೆ ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ. ಬಿಎಸ್‌ವೈ ವಿರುದ್ದದ ತನಿಖೆಗೆ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಬಿಎಸ್‌ವೈ ವಿರುದ್ದ ಎಸಿಬಿ ದೂರು ದಾಖಲಿಸಿದ್ದು, ತನಿಖೆ ನಡೆಸಲು ಅವಕಾಶ ನೀಡುವಂತೆ ಕೋರಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿತ್ತು.  ಈ ಮನವಿಯನ್ನು ರದು ಮಾಡುವಂತೆ ಮನವಿ ಸಲ್ಲಿಸಲಾಗಿದ್ದು, ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ.

 

Comments are closed.