ಭೂತದ ಬಾಯಲ್ಲಿ ಭಗವದ್ಗೀತೆ ಬಂದಂತೆ ಬಿಜೆಪಿಯವ್ರು ಮಾತಾಡ್ತಾರೆ : ಸಿದ್ದರಾಮಯ್ಯ

ಬೆಂಗಳೂರು : ಭೂತದ ಬಾಯಲ್ಲಿ ಭಗವದ್ಗೀತೆ ಬಂದಂತೆ ಬಿಜೆಪಿಯವರು ಮಾತನಾಡುತ್ತಾರೆ. ತಮ್ಮ ಅಧಿಕಾರದ ಅವಧಿಯಲ್ಲಿ ಮಾಡಬಾರದ್ದನ್ನು ಮಾಡಿ ಜೈಲಿಗೂ ಹೋಗಿ ಬಂದ ಅವರು ದಿನಕ್ಕೊಂದು ಸುಳ್ಳು ಹೇಳಿಕೊಂಡು ತಿರುಗಾಡುತ್ತಿದ್ದಾರೆ‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಬಿಬಿಎಂಪಿಯಲ್ಲಿ ಐದು ವರ್ಷ ಬಿಜೆಪಿಯವರೇ ಆಡಳಿತ ನಡೆಸಿದರು. ಆದರೂ ಅವರೇಕೆ ಬೆಂಗಳೂರು ನಗರದ ಅಭಿವೃದ್ಧಿ ಮಾಡಲಿಲ್ಲ ಎಂದು ಪ್ರಶ್ನಿಸಿದ್ದಾರೆ.

ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ, ಉದ್ಘಾಟನೆ ನೆರವೇರಿಸಿ ಸಿಎಂ ಮಾತನಾಡಿದರು. ನಾವು ಬಿಬಿಎಂಪಿಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಬಳಿಕ ಹಲವಾರು ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಂಡಿದ್ದೇವೆ. ರಾಜ ಕಾಲುವೆ ಅಭಿವೃದ್ಧಿಗೆ ಒಂದು ಸಾವಿರ ಕೋಟಿ ವೆಚ್ಚ ಮಾಡುತ್ತಿದ್ದೇವೆ. ಬಿಜೆಪಿಯವರು ಆಡಳಿತ ನಡೆಸುವಾಗ ಎಂಟು ಸಾವಿರ ಕೋಟಿ ರೂ.ಗಳ ಪಾಲಿಕೆ ಆಸ್ತಿಯನ್ನು ಅಡಮಾನ ಇಟ್ಟಿದ್ದರು. ನಾವು ಈಗ ಅದನ್ನು ಒಂದೊಂದಾಗಿ ಬಿಡಿಸಿಕೊಳ್ಳುತ್ತಿದ್ದೇವೆ.

ಮುಂದೆ ನಾವು ಅಧಿಕಾರಕ್ಕೆ ಬಂದ ಬಳಿಕ ಬೆಂಗಳೂರಿನ ಎಲ್ಲ ರಸ್ತೆಗಳಿಗೆ ವೈಟ್ ಟ್ಯಾಪಿಂಗ್ ಮಾಡುತ್ತೇವೆ. ಈಗಾಗಲೇ ಒಂದು ಸಾವಿರ ಕೋಟಿಯನ್ನು ಅದಕ್ಕಾಗಿ ಖರ್ಚು ಮಾಡಿದ್ದೇವೆ.

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರ ಬಿಬಿಎಂಪಿಗೆ 7,300 ಕೋಟಿ ರೂ.ಗಳ ಅನುದಾನ ಕೊಟ್ಟಿದೆ.

ಬೆಂಗಳೂರಿನ ಜನಸಂಖ್ಯೆ ಹೆಚ್ಚಾಗಿದೆ. ಒತ್ತಡದ ಪರಿಣಾಮ ಆಡಳಿತ ಕಷ್ಟವಾಗಿದೆ. ಹೀಗಾಗಿ ಬಿಬಿಎಂಪಿ ವಿಭಜನೆ ಕುರಿತು ಚಿಂತನೆ ನಡೆದಿದೆ.

ನಾಡಪ್ರಭು ಕೆಂಪೇಗೌಡರ ಹೆಸರನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡಿದವರು ನಾವು. ಜೊತೆಗೆ ಅವರ ಹೆಸರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅದ್ಯಯನ ಕೇಂದ್ರ ಸ್ಥಾಪಿಸಿದ್ದೇವೆ. ಇದನ್ನು ವೋಟಿಗಾಗಿ ಮಾಡಿಲ್ಲ. ಕೆಂಪೇಗೌಡರಿಗೆ ಗೌರವ ಸಲ್ಲಿಸಲು ಮಾಡಿದ್ದೇವೆ. ಇದರಲ್ಲಿ ರಾಜಕಾರಣ ಇಲ್ಲ.

ಬಿಬಿಎಂಪಿಗೆ ಹೊಸದಾಗಿ ಸೇರಿದ ಹಳ್ಳಿಗಳಿಗೆ ರಸ್ತೆ, ನೀರು, ಚರಂಡಿ ವ್ಯವಸ್ಥೆ ಕಲ್ಪಿಸುತ್ತಿದ್ದೇವೆ. ಇಂದಿರಾ ಕ್ಯಾಂಟೀನ್ ನಮ್ಮ ಕೊಡುಗೆ. ಹಿಂದಿನವರು ಏಕೆ ಈ ಕೆಲಸ ಮಾಡಲಿಲ್ಲ. ಆಗ ಬಡವರು ಇರಲಿಲ್ಲವೇ.

ಅಕ್ಟೋಬರ್ 2 ಕ್ಕೆ ಇನ್ನೂ 50, ನವೆಂಬರ್ 1ಕ್ಕೆ 47 ಇಂದಿರಾ ಕ್ಯಾಂಟೀನ್ ಉದ್ಘಾಟನೆಯಾಗಲಿದೆ. ಆಸ್ಪತ್ರೆಗಳಲ್ಲಿ ಸಹ ಕ್ಯಾಂಟೀನ್ ಆರಂಭಿಸಲಾಗುವುದು.

ಪೌರ ಕಾರ್ಮಿಕರ ಸೇವೆ ಕಾಯಂ ಮತ್ತು ಅವರ ಸಂಬಳ ಹೆಚ್ಚಿಸುವ ಕೆಲಸವನ್ನು ನಾವು ಮಾಡಿದ್ದೇವೆ‌. ಪ್ರತಿ ತಿಂಗಳು ತಲಾ 17 ಸಾವಿರ ರೂ.ಗಳ ವೇತನ ಪೌರ ಕಾರ್ಮಿಕರ ಅಕೌಂಟ್ ಗೆ ನೇರವಾಗಿ ಹೋಗುತ್ತದೆ. ಕೊಳೆಗೇರಿ ನಿವಾಸಿಗಳ ನೀರಿನ ಬಾಕಿ ಬಿಲ್ ಮನ್ನಾ ಮಾಡಿದ್ದು, ಪ್ರತಿ ತಿಂಗಳು ಅವರಿಗೆ ಹತ್ತು ಸಾವಿರ ಲೀಟರ್ ನೀರು ಉಚಿತವಾಗಿ ಕೊಡುತ್ತಿದ್ದೇವೆ. ಬೆಂಗಳೂರು ನಗರ ಡೈನಾಮಿಕ್ ಸಿಟಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಬೆಂಗಳೂರಿನ ಬ್ರಾಂಡ್ ಉಳಿಸಿಕೊಳ್ಳಲು ಎಲ್ಲ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ ಎಂದು ಮುಖ್ಯಮಂತ್ರಿಯವರು ಹೇಳಿದರು.

5 thoughts on “ಭೂತದ ಬಾಯಲ್ಲಿ ಭಗವದ್ಗೀತೆ ಬಂದಂತೆ ಬಿಜೆಪಿಯವ್ರು ಮಾತಾಡ್ತಾರೆ : ಸಿದ್ದರಾಮಯ್ಯ

 • October 18, 2017 at 12:03 PM
  Permalink

  I really like your blog.. very nice colors & theme. Did you design this website yourself or did you hire someone to do it for you? Plz reply as I’m looking to create my own blog and would like to find out where u got this from. cheers|

 • October 18, 2017 at 1:49 PM
  Permalink

  Hey There. I found your blog using msn. This is a very well written article. I will make sure to bookmark it and come back to read more of your useful information. Thanks for the post. I will certainly return.|

 • October 20, 2017 at 9:46 PM
  Permalink

  Very rapidly this web page will be famous amid all blogging and site-building visitors, due to it’s fastidious articles|

 • October 24, 2017 at 2:19 PM
  Permalink

  I have been surfing online more than 3 hours lately, but I by no means discovered any fascinating article like yours.
  It’s beautiful value enough for me. In my view, if all website owners and bloggers made good content as you did, the net can be
  a lot more helpful than ever before.

Comments are closed.

Social Media Auto Publish Powered By : XYZScripts.com