ಜಗತ್ಪ್ರಸಿದ್ಧ ಮೈಸೂರು ಜಂಬೂ ಸವಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಮೈಸೂರು : ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ 407 ನೇ ದಸರಾ ಮಹೋತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ವಿಶ್ವವಿಖ್ಯಾತ ಜಂಬೂ ಸವಾರಿಗೆ ಚಾಲನೆ ನೀಡಿದ್ದಾರೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಜಂಬೂಸವಾರಿ ವೀಕ್ಷಣೆಗೆ ಲಕ್ಷಾಂತರ ಜನ ಭಾಗವಹಿಸಿದ್ದರು. ಬಣ್ಣ, ಬಣ್ಣದ ಚಿತ್ತಾರಗಳಿಂದ ಗಜಪಡೆ ಕಂಗೊಳಿಸುತ್ತಿದ್ದವು. ವೀರಗಾಸೆ ಕುಣಿತ, ಡೊಳ್ಳು ಕುಣಿತ ಜನರನ್ನು ರಂಜಿಸಿದವು. ಸಂಜೆ 4.45ಕ್ಕೆ ಸಿಎಂ ಸಿದ್ದರಾಮಯ್ಯ ಚಾಮುಂಡಿ ದೇವಿಗೆ ಪೂಜೆ ಸಲ್ಲಿಸಲಿದ್ದಾರೆ.

ಮುಂದಿನ ಬಾರಿಯೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತೆ, ಹಾಗಾಗಿ ಮುಂದಿನ ಸಲವೂ ನಾನೇ ದಸರಾ ಪೂಜೆಯನ್ನು ಮಾಡುತ್ತೇನೆ ಎಂದು ನಂದಿಧ್ವಜ ಪೂಜೆಯ ಬಳಿಕ ಸುದ್ದಿಗಾರರ ಜತೆ ಮಾತನಾಡುತ್ತ ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.