ಮೈಸೂರಿನಲ್ಲಿ ಕಳೆಗಟ್ಟಿದ ದಸರಾ ಸಂಭ್ರಮ : ಜಂಬೂ ಸವಾರಿಗೆ ಕ್ಷಣಗಣನೆ ಆರಂಭ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾದ ವಿಜಯದಶಮಿ ಮೆರವಣಿಗೆ ನಡೆಯಲಿದ್ದು, ಇದರೊಂದಿಗೆ ನವರಾತ್ರಿ ಉತ್ಸವಕ್ಕೆ ತೆರೆ ಬೀಳಲಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಜಂಬೂ ಸವಾರಿ ಆರಂಭವಾಗಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸಲಿದ್ದು, ನಾಡಿನ ಜನತೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಸಂಜೆ 4.45ಕ್ಕೆ ಸಲ್ಲುವ ಶುಭ ಕುಂಭಲಗ್ನದಲ್ಲಿ ವಿಜಯ ದಶಮಿಯ ಮೆರವಣಿಗೆಗೆ ಸಿಎಂ ಚಾಲನೆ ನೀಡಲಿದ್ದಾರೆ. ಜಂಬೂಸವಾರಿ ಮೆರವಣಿಗೆ ಅರಮನೆಯ ಒಳ ಆವರಣದಿಂದ  ಕೆ.ಆರ್ ್ಸರ್ಕಲ್‌ ಮೂಲಕ ಸಯ್ಯಾಜಿರಾವ್ ರಸ್ತೆಯಲ್ಲಿ ಸಾಗಿ ಬನ್ನಿ ಮಂಟಪ ತಲುಪಲಿದೆ. ನಂತರ ಬನ್ನಿ ಮಂಟಪದಲ್ಲಿ ರಾತ್ರಿ 8 ಗಂಟೆಗೆ ಪಂಜಿನ ಕವಾಯತು ನಡೆಯಲಿದ್ದು, ರಾಜ್ಯಪಾಲ ವಜೂಭಾಯಿವಾಲಾ ಕಾರ್ಯಕ್ರಮ ವೀಕ್ಷಿಸಿ, ಗೌರವ ವಂದನೆ ಸಲ್ಲಿಸಲಿದ್ದಾರೆ.

ನಾಡದೇವತೆ ಚಾಮುಂಡೇಶ್ವರಿ ದೇವಿಯನ್ನು ಹೊರಲಿರುವ ಅರ್ಜುನ ಸೇರಿದಂತೆ ಎಲ್ಲಾ ಆನೆಗಳನ್ನೂ ಸಿದ್ದಗೊಳಿಸಲಾಗುತ್ತಿದೆ. ಜಂಬೂಸವಾರಿಗೆ ಎಲ್ಲಾ ರೀತಿಯ ಸಿದ್ಧತೆ ಮುಗಿದಿದೆ. ಜಂಬೂ ಸವಾರಿ ಮೆರವಣಿಗೆಯಲ್ಲಿ 40 ಕಲಾತಂಡಗಳು, 40 ಸ್ತಬ್ಧ ಚಿತ್ರಗಳು ಭಾಗವಹಿಸಲಿವೆ. ರಾಜ್ಯದ ಐತಿಹಾಸಿಕ ಹಿನ್ನೆಲೆ,ಕಲೆ, ವಾಸ್ತು ಶಿಲ್ಪವನ್ನು ಬಿಂಬಿಸುವ ಸ್ತಬ್ದಚಿತ್ರಗಳು ಇರಲಿದೆ. ದಸರಾ ವೀಕ್ಷಣೆಗಾಗಿ ಆಗಮಿಸುವವರಿಗಾಗಿ 25,400 ಹಾಗೂ ಪಂಜಿನ ಕವಾಯತು ಮೈದಾನದಲ್ಲಿ 26,300 ಆಸನಗಳ ವ್ಯವಸ್ಥೆ ಮಾಡಲಾಗಿದೆ. ದಸರಾ ಕಣ್ತುಂಬಿಕೊಳ್ಳಲು ಆಗಮಿಸುವ ಜನರಿಗಾಗಿ 10 ದ್ವಾರಗಳನ್ನು ನಿರ್ಧರಿಸಲಾಗಿದೆ.

 

Comments are closed.

Social Media Auto Publish Powered By : XYZScripts.com