ಕಳಪೆ ಕಾಮಗಾರಿ ಮಾಡುವ ಗುತ್ತಿಗೆದಾರರ ಹೆಸರನ್ನು ಬ್ಲಾಕ್ ಲಿಸ್ಟ್ ಗೆ ಸೇರಿಸಲಾಗುವುದು: BBMP

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚುವಲ್ಲಿ ಕಳಪೆ ಗುಣಮಟ್ಟದ ಕೆಲಸ ಮಾಡಿದ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಂಡು ಅವರನ್ನು ಕಪ್ಪುಪಟ್ಟಿಗೆ ಸೇರಿಸಲಾಗುವುದು ಎಂದು ಬಿಬಿಎಂಪಿ ನೂತನ ಮೇಯರ್ ಸಂಪತ್ ರಾಜ್ ಎಚ್ಚರಿಕೆ ನೀಡಿದ್ದಾರೆ.

ಈ ಬಾರಿ ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದಲ್ಲಿ ಮಳೆಯಾಗಿರುವ ಕಾರಣ ರಸ್ತೆಗಳೆಲ್ಲ ಹಾಳಾಗಿದ್ದು, ಸಂಪೂರ್ಣ ಗುಂಡಿಮಯವಾಗಿವೆ. ಇದರಿಂದಾಗಿ ಜನರ ಸಂಚಾರಕ್ಕೆ ತೊಂದರೆಯುಂಟಾಗಿದ್ದು, ಈಗ ಮಳೆ ಕಡಿಮೆಯಾಗುತ್ತಿದ್ದಂತೆ ರಸ್ತೆಗಳ ಗುಂಡಿ ಮುಚ್ಚುವ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಮೇಯರ್ ಹೇಳಿದ್ದಾರೆ.

ಸತತವಾಗಿ ಸುರಿದ ಬಾರಿ ಮಳೆಯಿಂದಾಗಿ ರಸ್ತೆಗಳು ಸಂಪೂರ್ಣ ಹದಗೆಟ್ತುಹೋಗಿದ್ದು, ಅನಾಹುತಗಳು ಸಂಭವಿಸುತ್ತಿವೆ. ಆರಂಭಿಕ ಸರ್ವೆ ಪ್ರಕಾರ ಪಾಲಿಕೆ ವ್ಯಾಪ್ತಿಯಲ್ಲಿ ಸುಮಾರು 12,678 ರಸ್ತೆಗುಂಡಿಗಳನ್ನು ಗುರುತಿಸಲಾಗಿದೆ. ಅವುಗಳಲ್ಲಿ ಸುಮಾರು 3,2`17 ಗುಂಡಿಗಳು ಮುಖ್ಯರಸ್ತೆಗಳ ಮಾರ್ಗದುದ್ದಕ್ಕೂ ಕಂಡು ಬರುತ್ತಿದೆ. ಶೀಘ್ರದಲ್ಲಿಯೇ ಎಲ್ಲಾ ರಸ್ತೆಗಳನ್ನೂ ಗುಂಡಿಮುಕ್ತ ರಸ್ತೆಗಳನ್ನಾಗಿ ಮಾಡಲಾಗುವುದು. ಮಳೆ ನಿಲ್ಲುತ್ತಿದ್ದಂತೆಯೇ ರಸ್ತೆ ಗುಂಡಿ ಮುಚ್ಚುವ ಕಾರ್ಯಕ್ಕೆ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ ಎಂದು ಸಂಪತ್ ರಾಜ್ ಭರವ್ಅಸೆ ನೀಡಿದ್ದಾರೆ.

ಇನ್ನು ಎರಡು ವರ್ಷಗಳ ಹಿಂದೆ ಮಲ್ಲೇಶ್ವರಂ, ಗಾಂಧೀನಗರ, ಆರ್ ಆರ್ ನಗರ ಪ್ರದೇಶಗಳಲ್ಲಿ ಐದು ಗುತ್ತಿಗೆದಾರರ ವಿರುದ್ಧ ಕಳಪೆ ಗುನಮಟ್ಟದ ಕಾಮಗಾರಿ ನಡೆಸಿದ ಬಗ್ಗೆ ದೂರು ದಾಖಲಾಗಿವೆ. ಈ ಬಗ್ಗೆ ಸಿಐಡಿ ತನಿಖೆಗೂ ವಹಿಸಲಾಯಿತು. ತನಿಖೆ ನಡೆಸಿದ ಸಿಐಡಿ ಈ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸುವಂತೆ ಶಿಫಾರಸು ಮಾಡಿತು. ಆದರೆ ಗುತ್ತಿಗೆದಾರರು ನ್ಯಾಯಾಲಯದ ಮೆಟ್ಟಿಲೇರಿ ತಡೆಯಾಜ್ನೆಯನ್ನು ತಂದರು. ಈ ಹಿನ್ನಲೆಯಲ್ಲಿ ಕಳಪೆ ಗುಣಮಟ್ಟದ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಈವರೆಗೆ ಯಾವೊಬ್ಬ ಗುತ್ತಿಗೆದಾರರ ವಿರುದ್ಧವೂ ಕ್ರಮ ಕೈಗೊಂಡಿಲ್ಲ. ಆದರೆ ಈಗ ನೂತನ ಮೇಯರ್ ಇಂತಹ ಕಳಪೆ ಗುಣಮಟ್ಟದ ರಸ್ತೆ ಕಾಮಗಾರಿ ನಡೆಸಿದ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ.

Social Media Auto Publish Powered By : XYZScripts.com