ಪೆಟ್ರೋಲ್ ಮತ್ತು ಡೀಸೆಲ್‌ ಬೆಲೆ ಕಡಿಮೆ ಮಾಡುವುದು ಕೇಂದ್ರದ ಜವಾಬ್ದಾರಿ : ಸಿ ಎಂ ….

ಬೆಂಗಳೂರು : ಪೆಟ್ರೋಲ್ ಮತ್ತು ಡೀಸೆಲ್‌ ಬೆಲೆ ಕಡಿಮೆ ಮಾಡುವುದು ಕೇಂದ್ರ ಸರ್ಕಾರದ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಕೇಂದ್ರ ರಾಜ್ಯ ಸರ್ಕಾರಗಳ ಕಡೆ ಬೆರಳು ತೋರಿಸುವುದು ಸರಿಯಲ್ಲ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.
ರಾಜ್ಯ ಸರ್ಕಾರ ಈಗಾಗಲೇ ತೆರಿಗೆ ಕಡಿಮೆ ಮಾಡಿದೆ. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಪೆಟ್ರೋಲ್, ಡೀಸೆಲ್ ದರ ನಮ್ಮಲ್ಲಿ  ಕಡಿಮೆ ಇದೆ.  ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲ ದರ  ಬ್ಯಾರೆಲ್ ಗೆ  ಈ ಹಿಂದೆ 130 ಡಾಲರ್ ಇದ್ದಾಗ ಪೆಟ್ರೋಲ್, ಡೀಸೆಲ್   ದರ ಎಷ್ಟು ಇತ್ತು.
ಈಗ ಕಚ್ಛಾ ತೈಲ ಬೆಲೆ ಬ್ಯಾರೆಲ್ ಗೆ 42 ಡಾಲರ್ ಇರುವಾಗ ಎಷ್ಟು ಇದೆ ಎಂಬುದನ್ನು ಗಮನಿಸಬೇಕು ಎಂದು ಸಿಎಂ ಹೇಳಿದ್ದಾರೆ.    ಆದರೂ ತೆರಿಗೆ ಕಡಿಮೆ ಮಾಡುವ ಕುರಿತು ಪರಿಶೀಲಿಸಲಾಗುವುದು ಎಂದು ತಿಳಿಸಿದ್ದಾರೆ

Comments are closed.