ಐಟಿ ದಾಳಿ : ತಂತ್ರಕ್ಕೆ ಪ್ರತಿ ತಂತ್ರ ಐಟಿ ಅಧಿಕಾರಿಗಳ ಮೇಲೆಯೇ ಎಸಿಬಿ ದಾಳಿ ಎಷ್ಟು ನಿಜ?..

ಬೆಂಗಳೂರು: ಕಾಂಗ್ರೆಸ್ ನಾಯಕರು, ಸಚಿವರ ಮನೆ ನಿವಾಸದ ಮೇಲೆ ಐಟಿ ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ಐಟಿ ಆಧಿಕಾರಿಗಳ ವಿರುದ್ಧವೇ ರಾಜ್ಯ ಸರ್ಕಾರ ತನ್ನ ಭ್ರಷ್ಟಾಚಾರ ನಿಗ್ರಹ ದಳದ ಮೂಲಕ ದಾಳಿ ನಡೆಸಲು ಯೋಜನೆ ರೂಪಿಸಿತ್ತು ಎಂಬ ಮಾಹಿತಿ  ಮಾಧ್ಯಮಗಳಿಗೆ ತಿಳಿದು ಬಂದಿದೆ.


ಕಾಂಗ್ರೆಸ್ ನಾಯಕರನ್ನೇ ಗುರಿಯಾಗಿಸಿಕೊಂಡು ಐಟಿ ಅಧಿಕಾರಿಗಳು ದಾಳಿ ನಡೆಸುತ್ತಿದ್ದಾರೆಂದು ಆರೋಪಿಸುತ್ತಿದ್ದ ಸಿದ್ದರಾಮಯ್ಯನವರ ಸರ್ಕಾರ ಇದೀಗ ಐಟಿ ಅಧಿಕಾರಿಗಳ ಮೇಲೆ ಎಸಿಬಿ ಬ್ರಹ್ಮಸ್ತ್ರ ಪ್ರಯೋಗಿಸಲು ಸಿದ್ದತೆ ನಡೆಸಿದ್ದ ಬಗ್ಗೆ ಐಟಿ ಅಧಿಕಾರಿಗಳು ಗುಪ್ತಚರ ಇಲಾಖೆ ಮಾಹಿತಿ ಕಲೆ ಹಾಕಿದೆ.

ಈ ಸಂಬಂಧ ಆದಾಯ ತೆರಿಗೆ ಇಲಾಖೆಯ ಹೆಚ್ಚುವರಿ ಮಹಾ ನಿರ್ದೇಶಕ ಬಿಆರ್ ಬಾಲಕೃಷ್ಣನ್ ಅವರು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಆರ್ ಕೆ ದತ್ತಾ ಅವರಿಗೆ ಪತ್ರವೊಂದನ್ನು ಬರೆದಿದ್ದಾರೆ ಎಂದು ಹೇಳಲಾಗುತ್ತಿದೆ. ಪತ್ರದಲ್ಲಿ ಎಸಿಬಿ ಐಟಿ ಅಧಿಕಾರಿಗಳ ಮೇಲೆ ದಾಳಿ ಮಾಡಲು ಯಾವುದೇ ಅಧಿಕಾರವಿಲ್ಲ ಎಂದು ಹೇಳಿದ್ದಾರೆ.

ಸುದ್ದಿ ಮಾಧ್ಯಮಗಳ ವರದಿ ಪ್ರಕಾರ ಪತ್ರದಲ್ಲಿ ಬಾಲಕೃಷ್ಣನ್ ಅವರು, ಐಟಿ ಆಧಿಕಾರಿಗಳ ಮೇಲೆ ರಾಜ್ಯ ಸರ್ಕಾರ ತನ್ನ ಭ್ರಷ್ಟಾಚಾರ ನಿಗ್ರಹ ದಳದ ಮೂಲಕ ದಾಳಿಗೆ ಯೋಜನೆ ರೂಪಿಸಿರುವ ಕುರಿತು ಉಲ್ಲೇಖಿಸಿದ್ದಾರೆ, ಐಟಿ ಆಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ದೂರುಗಳು ಬಂದಿದ್ದರೆ, ಸಿಬಿಐಗೆ ನೀಡಿ ಅಥವಾ ಐಟಿ ಇಲಾಖೆಯ ನಿರ್ದೇಶಕರಿಗೆ ದೂರು ನೀಡಲಿ. ಅದನ್ನು ಬಿಟ್ಟು ಅಧಿಕಾರಿಗಳ ಮೇಲೆ ದಾಳಿ ಮಾಡುವ ಯಾವುದೇ ರೀತಿಯ ಅಧಿಕಾರ ಎಸಿಬಿಗಾಗಲೀ ಅಥವಾ ರಾಜ್ಯ ಸರ್ಕಾರಕ್ಕೆ ಆಗಲಿ ಇಲ್ಲ ಎಂದು ಬಿಆರ್ ಬಾಲಕೃಷ್ಣನ್ ಅವರು ಪತ್ರದಲ್ಲಿ ಹೇಳಿದ್ದಾರೆ ತಿಳಿಸಿದ್ದಾರೆ ಎನ್ನಲಾಗುತ್ತಿದೆ.

ಇತ್ತೀಚೆಗೆ ರಾಜ್ಯದ ಕಾಂಗ್ರೆಸ್ ನಾಯಕರಾದ ಡಿಕೆ ಶಿವಕುಮಾರ್, ಲಕ್ಷ್ಮೀ ಹೆಬ್ಬಾಳ್ಕರ್, ರಮೇಶ್ ಜಾರಕಿಹೊಳಿ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ಇಬ್ಬರು ಮುಖಂಡರ ಮೇಲೆ ಮಾತ್ರವಲ್ಲದೇ ಇವರ ಬೆಂಬಲಿಗರು ಮತ್ತು ಸಂಬಂಧಿಕರ ಮನೆಗಳ ಮೇಲೂ ಐಟಿ ದಾಳಿಯಾಗಿತ್ತು.

Comments are closed.