ಜಂತರ್‌ ಮಂತರ್‌ನಲ್ಲಿ ನಡೆಯುವ ಪ್ರತಿಭಟನೆಯನ್ನು ಈ ಕ್ಷಣದಿಂದಲೇ ನಿಲ್ಲಿಸಿ : ಎನ್‌ಜಿಟಿ

ದೆಹಲಿ : ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುವ ಎಲ್ಲಾ ಪ್ರತಿಭಟನೆಗಳನ್ನೂ ತತ್‌ ಕ್ಷಣವೇ ನಿಲ್ಲಿಸುವಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ( ಎನ್‌ಜಿಟಿ ) ಆದೇಶಿಸಿದೆ. ದೆಹಲಿಯಲ್ಲಿ ಅತೀ ಹೆಚ್ಚಿನ ಮಟ್ಟದ ಶಬ್ದ ಮಾಲಿನ್ಯ ಉಂಟಾಗುತ್ತಿದ್ದು, ಅದನ್ನು ತಡೆಯುವ ದೃಷ್ಟಿಯಿಂದ ಪ್ರತಿಭಟನಾ ಸ್ಥಳದಲ್ಲಿನ ಮೈಕ್‌ಗಳು, ಲೌಡ್‌ ಸ್ಪೀಕರ್‌ ಸೇರಿದಂತೆ ಎಲ್ಲಾ ಶಬ್ದ ಮಾಲಿನ್ಯಕಾರಕ ವಸ್ತುಗಳನ್ನು ತೆಗೆದುಹಾಕುವಂತೆ  ನ್ಯಾ. ಆರ್‌.ಎಸ್‌ ರಾಥೋಡ್‌ ನೇತೃತ್ವದ ಹಸಿರು ಪೀಠ ದೆಹಲಿ ಮುನ್ಸಿಪಲ್ ಕೌನ್ಸಿಲ್‌ಗೆ ಸೂಚನೆ ನೀಡಿದೆ.

ಇತ್ತೀಚಿನ ದಿನಗಳಲ್ಲಿ ರಾಷ್ಟ್ರರಾಜಧಾನಿಯಲ್ಲಿ ವಾಯುಮಾಲಿನ್ಯ, ಶಬ್ದ ಮಾಲಿನ್ಯ ಹೆಚ್ಚುತ್ತಲೇ ಇದ್ದು, ಇದರಿಂದ ಜನರ ಆರೋಗ್ಯದ ಮೇಲೆ ಸಾಕಷ್ಟು ಪರಿಣಾಮ ಬೀರುತ್ತಿದೆ. ಆದ್ದರಿಂದ ಇಂತಹ ಶಬ್ದ ಮಾಲಿನ್ಯಗಳನ್ನು ನಿಯಂತ್ರಿಸುವ ದೃಷ್ಠಿಯಿಂದ ಜಂತರ್‌ ಮಂತರ್‌ನಲ್ಲಿ ನಡೆಯುವ ಪ್ರತಿಭಟನೆಯನ್ನು ಹಾಗೂ ಅದಕ್ಕೆ ಬಳಸುವ ದ್ವನಿವರ್ಧಕಗಳನ್ನು ತೆರವುಗೊಳಿಸುವಂತೆ ಆದೇಶಿಸಲಾಗಿದೆ.