ಚಾಮುಂಡೇಶ್ವರಿ, ವರುಣಾ ಕ್ಷೇತ್ರಗಳು ನನ್ನ ಕಣ್ಣಿದ್ದಂತೆ, ಜನರ ಋಣ ತೀರಿಸಿ ನಿವೃತ್ತಿಯಾಗುತ್ತೇನೆ : ಸಿಎಂ

ಬೆಂಗಳೂರು : ಮೈಸೂರಿನ ಚಾಮುಂಡೇಶ್ವರಿ ಹಾಗೂ ವರುಣಾ ಕ್ಷೇತ್ರಗಳು ನನ್ನ ಎರಡು ಕಣ್ಣಿದ್ದಂತೆ. ಎರಡೂ ಕ್ಷೇತ್ರದ ಜನತೆ ನನ್ನ ಮೇಲೆ ಅಪಾರ ವಿಶ್ವಾಸವಿಟ್ಟಿದ್ದಾರೆ. ಅವರ ಋಣ ತೀರಿಸಿ ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಚಾಮುಂಡೇಶ್ವರಿ ವಿಧಾನ ಸಭಾ ಕ್ಷೇತ್ರದ ಲಿಂಗಾಯಿತ ಸಮುದಾಯದ ನಾಯಕರು ಸಿಎಂ ಸಿದ್ದರಾಮಯ್ಯ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿದ್ದರು. ಈ ವೇಳೆ ಮಾತನಾಡಿದ ಸಿಎಂ, 2018ರ ಚುನಾವಣೆ ನನ್ನ ಕೊನೆಯ ಚುನಾವಣೆಯಾಗಲಿದೆ. ವರುಣಾ ಮತ್ತು ಚಾಮುಂಡೇಶ್ವರಿ ಕ್ಷೇತ್ರದ ಜನರ ಋಣ ತೀರಿಸುವುದು ಬಾಕಿ ಇದೆ. ಎರಡೂ ಕ್ಷೇತ್ರಗಳನ್ನು ಮಾದರಿಯನ್ನಾಗಿ ಮಾಡಲು ಸಾಕಷ್ಟು ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸ್ಪರ್ಧಿಸುವಂತೆ ಕೋರಿದ್ದೀರಿ. ಕಷ್ಟ ಕಾಲದಲ್ಲಿ ನನ್ನ ಕೈ ಹಿಡಿದಿದ್ದೀರಿ. ನನಗೆ ಈ ಎರಡೂ ಕ್ಷೇತ್ರಗಳು ರಾಜಕೀಯ ಮರುಜೀವ ನೀಡಿವೆ. ಎಂದಿಗೂ ನಾನು ಆಭಾರಿಯಾಗಿರುತ್ತೇನೆ ಎಂದಿದ್ದಾರೆ.

 

Comments are closed.

Social Media Auto Publish Powered By : XYZScripts.com