ರಿಸರ್ವ್ ಬ್ಯಾಂಕ್‌ ಮಾಜಿ ಗವರ್ನರ್‌ ರಘುರಾಂ ರಾಜನ್‌ಗೆ ನೊಬೆಲ್‌ ?

ದೆಹಲಿ : ಪ್ರಸಕ್ತ ಸಾಲಿನ ಅರ್ಥಶಾಸ್ತ್ರ ನೊಬೆಲ್‌ಗೆ ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್‌ ರಘುರಾಂ ರಾಜನ್‌ ಆಯ್ಕೆಯಾಗುವ ಸಾಧ್ಯತೆ ಇರುವುದಾಗಿ ಹೇಳಲಾಗುತ್ತಿದೆ. ನೊಬೆಲ್ ಪ್ರಶಸ್ತಿಯ ಸಂಭಾವ್ಯರ ಪಟ್ಟಿಯಲ್ಲಿ ರಾಜನ್ ಹೆಸರು ಇರುವುದಾಗಿ ಅಮೆರಿಕದ ದ ವಾಲ್‌ ಸ್ಟ್ರೀಟ್‌ ಜರ್ನಲ್‌ ವರದಿ ಮಾಡಿದೆ.

ಕಾರ್ಪೊರೇಟ್ ಕ್ಷೇತ್ರದಲ್ಲಿ ಹಣಕಾಸು ಹರಿವಿನ ಕುರಿತು ರಾಜನ್  ಪ್ರಮುಖ ನಿರ್ಧಾರ ಕೈಗೊಂಡಿದ್ದರು. ಈ ಹಿನ್ನೆಲೆಯಲ್ಲಿ ರಾಜನ್‌ ಅವರ ಹೆಸರನ್ನು ಪಟ್ಟಿಯಲ್ಲಿ ಸೇರಿಸಲಾಗಿದೆ ಎಂದು ವರದಿಯಾಗಿದೆ.

2008ರಲ್ಲಿ ವಿಶ್ವದಲ್ಲಿ ಆರ್ಥಿಕ ಹಿಂಜರಿತ ಉಂಟಾಗಲಿದೆ ಎಂದು ರಾಜನ್‌ 2005ರಲ್ಲೇ ಎಚ್ಚರಿಕೆ ನೀಡಿದ್ದರು. ಆದರೆ ಅವರ ಮಾತನ್ನು ಲಘುವಾಗಿ ಪರಿಗಣಸಲಾಗಿತ್ತು. ಆದರೆ ರಾಜನ್‌ ಭವಿಷ್ಯ ನಿಜವಾಗಿದ್ದು, ಅಮೆರಿಕದಲ್ಲಿ ಆರ್ಥಿಕತೆ ಕುಸಿದಿತ್ತು.

Comments are closed.

Social Media Auto Publish Powered By : XYZScripts.com