ಇನ್ನು 10 ದಿನದಲ್ಲಿ ರಸ್ತೆ ಗುಂಡಿ ಮುಚ್ಚಿಸಿ : ಬಿಬಿಎಂಪಿ ಅಧಿಕಾರಿಗಳಿಗೆ ಸಿಎಂ ಖಡಕ್‌ ಸೂಚನೆ

ಬೆಂಗಳೂರು :  ಬೆಂಗಳೂರಿನ ರಸ್ತೆಗಳಲ್ಲಿನ ಗುಂಡಿಯನ್ನು 10 ದಿನದೊಳಗೆ ಮುಚ್ಚುವಂತೆ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ರಸ್ತೆಯಲ್ಲಿದ್ದ ಗುಂಡಿಗೆ ಬಿದ್ದು ದಂಪತಿ ಹಾಗೂ ಮಹಿಳೆಯೊಬ್ಬರು ಸಾವಿಗೀಡಾಗಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಬಿಬಿಎಂಪಿ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ್ದಾರೆ.

ಇತ್ತೀಚೆಗಷ್ಟೇ ಮೈಸೂರು ರಸ್ತೆಯ ಮೇಲ್ಸೇತುವೆಗೆ ಹೋಗುವ ರಸ್ತೆಯಲ್ಲಿ ಗುಂಡಿ ಇದ್ದ ಕಾರಮ ದಂಪತಿ ಮೃತಪಟ್ಟಿದ್ದರು. ಭಾನುವಾರ ರಸ್ತೆ ಗುಂಡಿ ತಪ್ಪಿಸಲು ಹೋಗಿ ಮಹಿಳೆಯೊಬ್ಬರು ಕೆಳಗೆ ಬಿದ್ದು ಹಿಂಬದಿಯಿಂದ ಬರುತ್ತಿದ್ದ ಲಾರಿಗೆ ಬಲಿಯಾಗಿದ್ದರು.

ಪ್ರಕರಣ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಇನ್ನು 10ದಿನದೊಳಗೆ ರಸ್ತೆಯ ಗುಂಡಿಗಳನ್ನು ಮುಚ್ಚುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಿದ್ದು, ಇಲ್ಲವಾದಲ್ಲಿ ಸೂಕ್ತ ಕ್ರಮಕೈಗೊಳ್ಳುವುದಾಗಿ ಹೇಳಿದ್ದಾರೆ.

Social Media Auto Publish Powered By : XYZScripts.com