ಗೋದ್ರಾ ಹತ್ಯಾಕಾಂಡ : 11 ದೋಷಿಗಳಿಗೆ ಗಲ್ಲು ಶಿಕ್ಷೆ ಬದಲು ಜೀವಾವಧಿ

ಅಹಮದಾಬಾದ್‌ : 2002ರ ಫೆಬ್ರವರಿಯಲ್ಲಿ ನಡೆದಿದ್ದ ಗೋದ್ರಾ ಹತ್ಯಾಕಾಂಡ ಪ್ರಕರಣ ಸಂಬಂಧ 11 ದೋಷಿಗಳ ಗಲ್ಲು ಶಿಕ್ಷೆಯನ್ನು ಗುಜರಾತ್‌ ಹೈಕೋರ್ಟ್‌ ತಡೆಹಿಡಿದಿದ್ದು, ಅಪರಾಧಿಗಳ ಗಲ್ಲು ಶಿಕ್ಷೆಯನ್ನು ಜೀವಾವಧಿಗೆ ಮಾರ್ಪಾಟು ಮಾಡಿದೆ.

ಗೋದ್ರಾ ಸಾಬರಮತಿ ಎಕ್ಸ್‌ಪ್ರೆಸ್‌ರ ರೈಲು ಭೋಗಿಗೆ ಬೆಂಕಿ ಹಚ್ಚಲಾಗಿತ್ತು. ಈ ಈ ಪ್ರಕರಣದಲ್ಲಿ 11 ದೋಷಿಗಳ ಶಿಕ್ಷೆಯನ್ನು ಎತ್ತಿಹಿಡಿಯಲಾಗಿದ್ದು, ಮರಣದಂಡನೆಗೆ ಬದಲಾಗಿ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ. ಜೊತೆಗೆ ಪ್ರಕರಣದಲ್ಲಿ 63 ಮಂದಿಯನ್ನು ಖುಲಾಸೆಗೊಳಿಸಿದ್ದನ್ನು ಪ್ರಶ್ನಿಸಿ ಗುಜರಾತ್‌ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

2011ರಲ್ಲಿ ಎಸ್‌ಐಟಿ  ಕೋರ್ಟ್‌ ನೀಡಿದ್ದ ತೀರ್ಪನ್ನು ಮರು ಪರಿಶೀಲಿಸುವಂತೆ ಗುಜರಾತ್‌ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು. ಇದರ ವಿಚಾರಣೆ ನಡೆಸಿದ ನ್ಯಾಯಾಲಯ 63 ಮಂದಿಯನ್ನು ಖುಲಾಸೆ ಗೊಳಿಸಿ ನೀಡಿದ್ದ ಆದೇಶವನ್ನು ಎತ್ತಿ ಹಿಡಿದಿದೆ. ಜೊತೆಗೆ 2002ರಲ್ಲಿದ್ದ ಗುಜರಾತ್‌ ಸರ್ಕಾರದ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರದ ವಿಫಲತೆ ಇದರಲ್ಲಿ ಎದ್ದು ಕಾಣುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ. ಜೊತೆಗೆ ಘಟನೆಯಲ್ಲಿ ಗಾಯಾಳುಗಳಾದವರ ಕುಟುಂಬಕ್ಕೆ 10 ಲಕ್ಷ ಪರಿಹಾರ ಒದಗಿಸುವಂತೆ ಗುಜರಾತ್‌ ಸರ್ಕಾರಕ್ಕೆ ಆದೇಶಿಸಿದೆ.

2002ರಲ್ಲಿ ಸಬರಮತಿ ಎಕ್ಸ್‌ಪ್ರೆಸ್‌ ರೈಲಿನ ಆರು ಬೋಗಿಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರು. ಈ ಘಟನೆಯಲ್ಲಿ 59 ಮಂದಿ ಕರಸೇವಕರು ಸಜೀವ ದಹನವಾಗಿದ್ದರು. ಗೋದ್ರೋತ್ತರ ಹಿಂಸಾಚಾರದಲ್ಲಿ ಸಾವಿರಾರು ಮಂದಿ ಸಾವಿಗೀಡಾಗಿದ್ದರು.

Social Media Auto Publish Powered By : XYZScripts.com