ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ಜೋಡಿಗೆ ಕೂಡಿಬಂದ ಕಂಕಣಭಾಗ್ಯ : ಚಿರು ವೆಡ್ಸ್ ಮೇಘನಾ

ಬೆಂಗಳೂರು : ಸ್ಯಾಂಡಲ್‌ ವುಡ್‌ನಲ್ಲಿ ಮತ್ತೊಂದು ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ನಟ ಚಿರಂಜೀವಿ ಸರ್ಜಾ ಹಾಗೂ ಮೇಘನಾ ರಾಜ್‌ ಮದುವೆಯಾಗುತ್ತಿದ್ದಾರಂತೆ.

ಕೆಲ ವರ್ಷಗಳ ಹಿಂದೆ ದ್ವಾರಕೀಶ್‌ ನಿರ್ದೇಶನದ ಆಟಗಾರ ಸಿನಿಮಾದಲ್ಲಿ ಇಬ್ಬರೂ ಒಟ್ಟಿಗೆ ನಟಿಸಿದ್ದರು. ಬಳಿಕ ಸ್ನೇಹಿತರಾಗಿದ್ದ ಇವರು ಈಗ ಮದುವೆಗೆ ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಕ್ಟೋಬರ್‌ 22ರಂದು ಚಿರು ಹಾಗೂ ಮೇಘನಾ ನಿಶ್ಚಿತಾರ್ಥ ನಡೆಯಲಿದ್ದು, ಡಿಸೆಂಬರ್‌ ವೇಳೆಗೆ ಸಪ್ತಪದಿ ತುಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ.

ಆದರೆ ಈ ಬಗ್ಗೆ ಚಿರಂಜೀವಿ ಸರ್ಜಾ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ.

Comments are closed.