ಡಿಸೆಂಬರ್‌ ವೇಳೆಗೆ ಅನಿಲ ಭಾಗ್ಯ ಅನುಷ್ಠಾನಕ್ಕೆ ಸರ್ಕಾರ ನಿರ್ಧಾರ

ಬೆಂಗಳೂರು : ಕೇಂದ್ರ ಸರ್ಕಾರದ ಉಜ್ವಲ ಯೋಜನೆಗೆ ಪರ್ಯಾಯವಾಗಿ ಕರ್ನಾಟಕದಲ್ಲಿ ಅನಿಲ ಭಾಗ್ಯ ಯೋಜನೆಗೆ ಅನುಷ್ಠಾನಕ್ಕೆ ಕೊನೆಗೂ ಕಾಲ ಕೂಡಿಬಂದಿದೆ. ಇಂದಿರಾ ಕ್ಯಾಂಟೀನ್ ಬಳಿಕ ರಾಜ್ಯ ಸರ್ಕಾರ ಈಗ ಅನಿಲ ಭಾಗ್ಯ ಯೋಜನೆ ಜಾರಿಗೊಳಿಸಲು ಮುಂದಾಗಿದೆ.

ಮಂಗಳವಾರ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆದಿದ್ದು, ಈ ಸಭೆಯಲ್ಲಿ ಅನಿಲ ಭಾಗ್ಯ ಯೋಜನೆ ಜಾರಿಗೆ ತರುವ ಬಗ್ಗೆ ನಿರ್ಧರಿಸಲಾಗಿದೆ. ಉಜ್ವಲ ಯೋಜನೆಯ ಪ್ರಯೋಜನ ಪಡೆದವರನ್ನು ಹೊರತು ಪಡಿಸಿ ಉಳಿದ ಎಲ್ಲಾ ಬಿಪಿಎಲ್ ಕಾರ್ಡುದಾರರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಇದರಿಂದಾಗಿ ಎರಡು ಗ್ಯಾಸ್‌ ಸಿಲಿಂಡರ್, ಸ್ಟವ್‌ ಸರ್ಕಾರದ ವತಿಯಿಂದ ಸಿಗಲಿದೆ. ಈ ಯೋಜನೆಯ ಪ್ರಯೋಜನ ಪಡೆಯಲು ಪ್ರತೀ ಸಂಪರ್ಕಕ್ಕೆ 4040ರೂ ವೆಚ್ಚವಾಗುವುದು ಎಂದು ತಿಳಿದುಬಂದಿದೆ.

ರಾಜ್ಯದಲ್ಲಿ ಸುಮಾರು 10 ಲಕ್ಷ ಬಿಪಿಎಲ್‌ ಕುಟುಂಬಕ್ಕೆ ಗ್ಯಾಸ್ ಸಂಪರ್ಕ ನೀಡಲು ಸರ್ಕಾರ ಯೋಜನೆ ರೂಪಿಸಿದ್ದು, ಇದಕ್ಕಾಗಿ 300 ಕೋಟಿ ವ್ಯಯ ಮಾಡಲಿದೆ ಎಂದು ಈ ಹಿಂದೆ ಸಚಿವ ಟಿ.ಬಿ ಜಯಚಂದ್ರ ಹೇಳಿದ್ದರು. ಕೇಂದ್ರ ಸರ್ಕಾರದ ಉಜ್ವಲ ಯೋಜನೆಯಲ್ಲಿ ಕೇವಲ ಅನಿಲ ಸಂಪರ್ಕ ಮಾತ್ರ ನೀಡಲಾಗುತ್ತದೆ. ಆದರೆ ರಾಜ್ಯ ಸರ್ಕಾರದ ಯೋಜನೆಯಲ್ಲಿ ಸ್ಟವ್‌ ಸಹ ನೀಡಲಾಗುತ್ತಿದೆ.

ಆದರೆ ಎರಡರಲ್ಲಿ ಕೇವಲ ಒಂದು ಯೋಜನೆಯ ಲಾಭವನ್ನು ಮಾತ್ರ ಬಿಪಿಎಲ್‌ ಕುಟುಂಬಗಳು ಪಡೆಯಬೇಕಾಗಿವೆ.

 

Comments are closed.

Social Media Auto Publish Powered By : XYZScripts.com