ವರುಣಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದ ಶಂಕರ್‌ ಬಿದರಿ

ಬೆಂಗಳೂರು : ಈ ಬಾರಿಯ ವಿಧಾನ ಸಭಾ ಚುನಾವಣೆ ಭಾರೀ ಕುತೂಹಲ ಕೆರಳಿಸಿದೆ. ಸಿಎಂ ಸಿದ್ದರಾಮಯ್ಯ  ಪ್ರತಿನಿಧಿಸುವ ವರುಣಾ ಕ್ಷೇತ್ರದಿಂದ ಬಿಜೆಪಿ ನಿವೃತ್ತ ಪೊಲೀಸ್ ಅಧಿಕಾರಿ  ಶಂಕರ್‌ ಬಿದರಿ ಅವರನ್ನು ಕಣಕ್ಕಿಳಿಸಲು ನಿರ್ಧರಿಸಿದೆ.

ಈ ಬಾರಿ ಸಿಎಂ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ವರುಣಾ ಕ್ಷೇತ್ರದಿಂದ ಸಿಎಂ ಪುತ್ರ ಯತೀಂದ್ರ ಕಣಕ್ಕಿಳಿಯಲಿದ್ದಾರೆ. ಯತೀಂದ್ರ ವಿರುದ್ದ ಶಂಕರ್‌ ಬಿದರಿ ಅವರನ್ನು ನಿಲ್ಲಿಸಲು ಬಿಜೆಪಿ ಮಾಸ್ಟರ್ ಪ್ಲಾನ್ ಮಾಡಿದೆ. ವರುಣಾ ಕ್ಷೇತ್ರದಲ್ಲಿ ಪ್ರಬಲ ಅಭ್ಯರ್ಥಿಗಳಿಲ್ಲದ ಕಾರಣ ಶಂಕರ್ ಬಿದರಿ ಗೆಲುವು ಖಚಿತ ಎಂಬ ಯೋಚನೆ ಬಿಡೆಪಿಯದ್ದಾಗಿದೆ.

ಅಲ್ಲದೆ ವರುಣಾ ಕ್ಷೇತ್ರದಲ್ಲಿ ಲಿಂಗಾಯಿತ ಪ್ರಾಬಲ್ಯವಿದ್ದು. ಶಂಕರ್‌ ಬಿದರಿ ಇದೇ ಸಮುದಾಯಕ್ಕೆ ಸೇರಿರುವುದು ಶಂಕರ್ ಬಿದರಿ ಅವರ ಆಯ್ಕೆಗೆ ಕಾರಣ. ಜೊತೆಗೆ ದಕ್ಷ ಅಧಿಕಾರಿ ಎಂಬ ಖ್ಯಾತಿ ಪಡೆದಿದ್ದು, ಜನ ಮತಹಾಕುವ ಸಾಧ್ಯತೆ ಹೆಚ್ಚಿದೆ ಎನ್ನಲಾಗುತ್ತಿದೆ

ವರುಣಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಪಕ್ಷದ ವರಿಷ್ಠರು ಸೂಚನೆ ನೀಡಿದ್ದಾರೆ. ಪರಿವರ್ತನಾ ಯಾತ್ರೆ ಬಳಿಕ ಸಂಪೂರ್ಣವಾಗಿ ವರುಣಾ ಕ್ಷೇತ್ರದಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.

 

 

Social Media Auto Publish Powered By : XYZScripts.com