ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ರಸ್ತೆ ಗುಂಡಿ ಭಾಗ್ಯ : ಯಡಿಯೂರಪ್ಪ ಲೇವಡಿ

ಬೆಂಗಳೂರು : ಭಾರೀ ಮಳೆಯಿಂದಾಗಿ ಬೆಂಗಳೂರಿನಲ್ಲಿ ಅವಾಂತರ ಸೃಷ್ಠಿಯಾಗಿದ್ದು, ಈ ಸಂಬಂದ ಸರ್ಕಾರದ ವಿರುದ್ದ ಮಾಜಿ ಸಿಎಂ ಬಿಎಸ್‌ವೈ ಕಿಡಿ ಕಾರಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ವಿಶ್ವದರ್ಜೆಯ ಸೌಕರ್ಯಗಳನ್ನು ನೀಡುವುದಾಗಿ ಹೇಳುತ್ತಿದೆ. ಆದರೆ ಸಿದ್ದರಾಮಯ್ಯ ಸರ್ಕಾರ ರಾಜ್ಯದಲ್ಲಿ ಏನು ಮಾಡುತ್ತಿದೆ ಎಂಬುದನ್ನು ರಸ್ತೆ ಗುಂಡಿಗಳೇ ಹೇಳುತ್ತಿವೆ. ರಾಜ್ಯದ ಜನತೆಗೆ ಸಿಎಂ ಗುಂಡಿಗಳ ಭಾಗ್ಯ ನೀಡಿದ್ದಾರೆ ಎಂದು ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ.

ವಿಶ್ವದರ್ಜೆಯ ಸೌಲಭ್ಯಗಳನ್ನು ನೀಡುವುದಿರಲಿ ಮೂಲಭೂತ ಸೌಲಭ್ಯಗಳನ್ನು ನೀಡಲು ರಾಜ್ಯಸರ್ಕಾರ ವಿಫಲವಾಗಿದೆ. ರಸ್ತೆ ಗುಂಡಿಗಳಿಂದಾಗಿ ಐದು ಮಂದಿ ಸಾವಿಗೀಡಾಗಿದ್ದಾರೆ. ರಸ್ತೆ ಅಭಿವೃದ್ಧಿಗೆ 4000ಕೋಟಿ ಖರ್ಚು ಮಾಡಿದ್ದಾಗಿ ಹೇಳುತ್ತಿದೆ. ಅಲ್ಲದೆ 100ಕೋಟಿ ಸಾಲ ಮಾಡಿದೆ. ಹಾಗಾದರೆ ಆ ಹಣ ಎಲ್ಲಿ ಹೋಯಿತು ಎಂದು ಪ್ರಶ್ನಿಸಿದ್ದಾರೆ.

 

Comments are closed.

Social Media Auto Publish Powered By : XYZScripts.com