ಪಕ್ಷ ವಿರೋಧಿ ಹೇಳಿಕೆ : ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಕಾಂಗ್ರೆಸ್‌ನಿಂದ ಉಚ್ಚಾಟನೆ…

ಬೆಂಗಳೂರು : ಪಕ್ಷ ವಿರೋಧಿ ಹೇಳಿಕೆಗಳನ್ನು ನೀಡಿ ಕಾಂಗ್ರೆಸ್ ನಾಯಕರಿಗೆ ಮುಜುಗರ ಉಂಟುಮಾಡಿದ್ದ ದೇವರಹಿಪ್ಪರಗಿ ಕ್ಷೇತ್ರದ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಿ ಆದೇಶ ಹೊರಡಿಸಲಾಗಿದೆ..

ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಎ.ಎಸ್.ಪಾಟೀಲ ನಡಹಳ್ಳಿ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ. ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಕ್ಷೇತ್ರದಿಂದ 2013ರ ಚುನಾವಣೆಗೆ ಸ್ಪರ್ಧಿಸಿದ್ದ ಎ.ಎಸ್.ಪಾಟೀಲ ನಡಹಳ್ಳಿ ಅವರು ಗೆಲುವು ಸಾಧಿಸಿದ್ದರು. .

ಎಸ್.ಪಾಟೀಲ ನಡಹಳ್ಳಿ ಅವರು ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿದ್ದರು. ‘2018ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ’ ಎಂದು ಅವರು ಈಗಾಗಲೇ ಘೋಷಣೆ ಮಾಡಿದ್ದಾರೆ. ಅವರು ಪಕ್ಷಕ್ಕೆ ಬಂದರೆ ಸ್ವಾಗತಿಸುತ್ತೇನೆ’ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಈಗಾಗಲೇ ಹೇಳಿಕೆ ನೀಡಿದ್ದಾರೆ.


ಎ.ಎಸ್.ಪಾಟೀಲ ನಡಹಳ್ಳಿ ಅವರು ಹಲವು ಬಾರಿ ಪಕ್ಷದ ನಾಯಕರಿಗೆ ಮುಜುಗರವಾಗುವಂತಹ ಹೇಳಿಕೆಗಳನ್ನು ನೀಡಿದ್ದಾರೆ. ‘ಸರ್ಕಾರ ಉತ್ತರ ಕರ್ನಾಟಕದ ಅಭಿವೃದ್ಧಿ ಕಡೆಗಣಿಸಿದೆ. ಆದ್ದರಿಂದ ಅದು ಪ್ರತ್ಯೇಕ ರಾಜ್ಯವಾಗಬೇಕು’ ಎಂದು ಹೇಳಿಕೆ ನೀಡಿ ವಿವಾದವೆಬ್ಬಿಸಿದ್ದರು.
‘ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿರುವ ನಡಹಳ್ಳಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸುತ್ತೇನೆ’ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಮತ್ತು ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದರು.

Comments are closed.

Social Media Auto Publish Powered By : XYZScripts.com