ಮೋದಿ ಕಣ್ಣಿದ್ದೂ ಕುರುಡರು, ಕಿವಿಯಿದ್ದೂ ಕಿವುಡರು, ಹೀಗಾದ್ರೆ ನಾನೇನು ಮಾಡ್ಲಿ : ಎಚ್‌ಡಿಡಿ

ಬಳ್ಳಾರಿ : ಮಹದಾಯಿ ನದಿ ನೀರಿನ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ಅವರು ಕಣ್ಣಿದ್ದೂ ಕುರುಡರಾಗಿದ್ದಾರೆ. ಕಿವಿಯಿದ್ದೂ ಕಿವುಡರಾಗಿದ್ದಾರೆ. ಹೀಗಾದರೆ ನಾವೇನು ಮಾಡಲು ಸಾಧ್ಯ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಳ್ಳಾರಿಯ ಹೂವಿನ ಹಡಗಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ದೇವೇಗೌಡ, ಟಿಪ್ಪು ಜಯಂತಿ ವಿಚಾರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕೆಸರೆರಚಾಟ ನಡೆಸುತ್ತಿದ್ದಾರೆ. ಈ ರೀತಿ ನಡೆದುಕೊಳ್ಳುವುದರಲ್ಲಿ ಅರ್ಥವಿಲ್ಲ. ಬಿಎಸ್‌ವೈ ತಮ್ಮ ಅವಧಿಯಲ್ಲಿ ಟಿಪ್ಪು ಜಯಂತಿಗೆ ಬೆಂಬಲ ನೀಡಿದ್ದರು. ಈಗ ಉಲ್ಟಾ ಮಾತನಾಡುತ್ತಿದ್ದಾರೆ. ಈ ರೀತಿ ಅತಿರೇಕದ ವರ್ತನೆ ಯಾರಿಗೂ ಒಳ್ಳೆಯದಲ್ಲ ಎಂದಿದ್ದಾರೆ.