ವಿಜಯ್‌ ಶಂಕರ್‌ ಬಿಜೆಪಿ ತೊರೆಯಲು ಇದಾ ಕಾರಣ…..? ಸತ್ಯ ಬಿಚ್ಚಿಟ್ಟ ಮಾಜಿ ಸಂಸದ

ಮೈಸೂರು : ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಬಾಕಿ ಇದೆ ಎನ್ನುವಾಗಲೆ ಬಿಜೆಪಿಗೆ ಮೈಸೂರು ಭಾಗದಲ್ಲಿ ಹಿನ್ನೆಡೆಯಾಗಿದೆ. ಪಕ್ಷದ ರೈತ ಮೋರ್ಚಾ ಅಧ್ಯಕ್ಷ ವಿಜಯ್‌ ಶಂಕರ್‌ ರಾಜೀನಾಮೆ ನೀಡಿದ್ದು, ಇದಕ್ಕೆ ಕಾರಣ ಏನೆಂಬುದನ್ನು ಬಾಯ್ಬಿಟ್ಟಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ನನ್ನನ್ನು ಹಾಸನ ಕ್ಷೇತ್ರದಿಂದ ಬಲವಂತವಾಗಿ ಕಣಕ್ಕಿಳಿಸಲಾಗಿತ್ತು. ಪಕ್ಷಕ್ಕಾಗಿ ಅನೇಕ ವರ್ಷಗಳಿಂದ ದುಡಿದಿದ್ದೇನೆ. ಪಿರಿಯಾ ಪಟ್ಟಣದಿಂದ ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಆಸೆ ಇತ್ತು. ಆದರೆ ಅಲ್ಲಿಗೆ ಬೆಂಗಳೂರಿನ ಉದ್ಯಮಿಯೊಬ್ಬರನ್ನು ನಿಲ್ಲಿಸಲು ತಯಾರಿ ನಡೆಸಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ಸ್ಪರ್ಧಿಸುವಂತೆ ಪಕ್ಷದಿಂದ ಒತ್ತಾಯಿಸಲಾಗಿತ್ತು. ಆದ್ದರಿಂದ ಮನನೊಂದು ಪಕ್ಷವನ್ನು ತೊರೆದಿರುವುದಾಗಿ ಹೇಳಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com